Saturday, June 19, 2021
No menu items!
Home Entertainment ( Kan ) ಚಿತ್ರರಂಗದಲ್ಲಿ 40 ವರ್ಷ ಪೂರೈಸಿದ ನವರಸ ನಾಯಕ

ಚಿತ್ರರಂಗದಲ್ಲಿ 40 ವರ್ಷ ಪೂರೈಸಿದ ನವರಸ ನಾಯಕ

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಸಿನಿರಂಗದಲ್ಲಿ 40 ವರ್ಷ ಪೂರೈಸಿದ್ದಾರೆ. ಕಾಮಿಡಿ, ವಿಲನ್, ಹೀರೋ ಹೀಗೆ ಎಲ್ಲಾ ಪಾತ್ರಗಳಲ್ಲೂ ರಂಜಿಸುತ್ತಾ ಬಂದಿರುವ ಅವರು ಖುಷಿಯನ್ನ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ಅದರಲ್ಲಿ ತಮ್ಮ ವೃತ್ತಿ ಹಾಗೂ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಹಾಗೂ ಆಸಕ್ತಿಕರ ವಿಚಾರಗಳ ಕುರಿತು ಹಂಚಿಕೊಳ್ಳುತ್ತಿರುತ್ತಾರೆ. ವೃತ್ತಿ ಜೀವನ ಆರಂಭಿಸಿದ ದಿನಗಳಲ್ಲಿ ಪಟ್ಟ ಕಷ್ಟ ಹಾಗೂ ಬಣ್ಣದ ಬದುಕಿನಲ್ಲಿ ಕಂಡ ಏರಿಳಿತಗಳ ಬಗ್ಗೆ ಈಗಾಗಲೇ ಸಾಕಷ್ಟು ಸಲ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಇಂತಹ ನಟ ಸ್ಯಾಂಡಲ್ವುಡ್ಗೆ ಕಾಲಿಟ್ಟು, ಇಂದಿಗೆ ಬರೋಬ್ಬರಿ 40 ವರ್ಷ ತುಂಬಿದೆ. 1980 ರ ನವೆಂಬರ್ 17 ರಂದು ಜಗ್ಗೇಶ್ ಮೊತ್ತ ಮೊದಲ ಬಾರಿಗೆ ಸಿನಿರಂಗ ಪ್ರವೇಶಿಸಿದರು. ಇಂದು 2020, ನವೆಂಬರ್ 17 ಹೀಗಾಗಿ ಈ ಖುಷಿಯ ವಿಚಾರವನ್ನು ಜಗ್ಗೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಕಲಾಸೇವೆಯ ಈ ಪಯಣದಲ್ಲಿ ಅವರಿಗೆ ಸಹಕಾರಿಯಾದವರನ್ನು ನೆನೆದಿದ್ದಾರೆ.


ಸಿನಿರಂಗಕ್ಕೆ ನಾ ಬಂದು ಇಂದಿಗೆ 40ವರ್ಷ. ಈ ಬೆಳವಣಿಗೆಗೆ ಪ್ರೋತ್ಸಾಹಿಸಿದ ನಿರ್ದೇಶಕ, ನಿರ್ಮಾಪಕ, ಭುಜತಟ್ಟಿದ ಅಂದಿನ ನನ್ನ ಕಲಾಕುಟುಂಬ, ಮಾಧ್ಯಮ, ಕನ್ನಡದ ಮನಸ್ಸುಗಳು! ಅಪಮಾನಿಸಿದ ಸ್ನೇಹಕ್ಕೆ, ಗೆಲ್ಲುವೆ ಹೋಗು ಕರಿಯ ಎಂದು ಹರಸಿದ ಅಮ್ಮ, ಜೊತೆನಿಂತ ಪರಿಮಳ, ಕೋಮಲ್ ಹಾಗೂ ರಾಯರ ದಯೆಗೆ ಆಜನ್ಮ ಋಣಿ! ಹರಸಿ’ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಇವರ ಕಲಾಸೇವೆಯಲ್ಲಿ 40 ವರ್ಷ ಪೂರೈಸಿದ್ದಕ್ಕಾಗಿ ಸಿನಿ ಸೆಲೆಬ್ರಿಟಿಗಳು ವಿಶ್ ಮಾಡಿದ್ದಾರೆ. ನಿರ್ದೇಶಕ ಪ್ರೇಮ್, ದುನಿಯಾ ವಿಜಯ್, ರಿಷಭ್ ಶೆಟ್ಟಿ, ರಕ್ಷಿತಾ ಪ್ರೇಮ್, ಸಿಂಪಲ್ ಸಿನಿ, ಅನು ಪ್ರಭಾಕರ್ ಸೇರಿದಂತೆ ಹಲವರು ಶುಭ ಕೋರಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments