ದೆಹಲಿ: ದೆಹಲಿಯಲ್ಲಿ ಕೊರೊನಾ ವೈರಸ್ ಅಬ್ಬರ ಮತ್ತೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 104 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 7,053 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಒಂದೇ ದಿನ 104 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದೆ. ದೆಹಲಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,67,028 ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಈಗಾಗಲೇ 4.16 ಲಕ್ಷ ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ಈ ಕುರಿತು ಇಂದು ಮಾತನಾಡಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇನ್ನು ಏಳೆಂಟು ದಿನಗಳ ಒಳಗಾಗಿ ಸೋಂಕಿನ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ವಾಯು ಮಾಲಿನ್ಯದಿಂದ ಈ ರೀತಿ ಸೋಂಕು ಹೆಚ್ಚಲು ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಅಕ್ಟೋಬರ್ 20 ರವರೆಗೆ ಸೋಂಕು ಹತೋಟಿಯಲ್ಲಿತ್ತು. ಆದರೆ ಈಗ ನಿಯಂತ್ರಣ ಮೀರಿದೆ. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು ದೆಹಲಿಯ 24 ಗ್ರಾಮಗಳ ಶೇ.70-95ರಷ್ಟು ಕೊಳತ ಕೃಷಿ ತ್ಯಾಜ್ಯಗಳ ನಿರ್ವಹಣೆಗೆ ಪರಿಹಾರವನ್ನು ಕಂಡು ಹಿಡಿದಿದೆ’ ಎಂದು ಅವರು ಮಾಹಿತಿ ನೀಡಿದರು.
ರಾಷ್ಟ್ರ ರಾಜಧಾನಿಯಲ್ಲಿ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ ದೆಹಲಿ ಹೈ ಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಜನರ ಜೀವನ ಸರ್ಕಾರದ ಜವಬ್ದಾರಿಯಾಗಿದ್ದು, ಅದರ ಜೊತೆಗೆ ಆಟವಾಡಬಾರದು. ಖಾಸಗಿ ಆಸ್ಪತ್ರೆ ಸೇರಿದಂತೆ ಸರ್ಕಾರ ಜನರ ಆರೋಗ್ಯಕ್ಕೆ ಹೊಣೆಗಾರರಾಗಿದ್ದು, ಅವರ ಜೀವನ ರಕ್ಷಣೆ ಮಾಡಬೇಕು ಎಂದು ಎಚ್ಚರಿಸಿದೆ.
पराली को खाद में बदलने वाली बायो-डिकम्पोज़र तकनीक दिल्ली में कामयाब रही। अब वक्त आ गया है कि सभी सरकारें इसे लागू कर किसानों की मदद करें।
Press Conference | LIVE https://t.co/mxHyuP7NxP— Arvind Kejriwal (@ArvindKejriwal) November 13, 2020