Saturday, July 24, 2021
No menu items!
Home Karnataka ಪೊಲೀಸರೆಂದು ಹೇಳಿಕೊಂಡು ಬಂದು 800 ಕೆಜಿ ಚಿನ್ನಾಭರಣ ಕಳ್ಳತನ..!

ಪೊಲೀಸರೆಂದು ಹೇಳಿಕೊಂಡು ಬಂದು 800 ಕೆಜಿ ಚಿನ್ನಾಭರಣ ಕಳ್ಳತನ..!

ಬೆಂಗಳೂರು: ಪೊಲೀಸರು ಎಂದು ಹೇಳಿಕೊಂಡು ಚಿನ್ನಾಭರಣ ಮಳಿಗೆಗೆ ನುಗ್ಗಿ, ಚಿನ್ನಾಭರಣ ದೋಚಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಹಲಸೂರು ಗೇಟ್ ನಗರ್ತಪೇಟೆಯಲ್ಲಿರುವ ಗೀತಾ ಜ್ಯುವೆಲ್ಲರ್ಸ್ ನಲ್ಲಿ ಈ ಘಟನೆ ನಡೆದಿದೆ.

ಗೀತಾ ಜ್ಯುವೆಲ್ಲರ್ಸ್ ನಲ್ಲಿ ಚಿನ್ನಾಭರಣವನ್ನು ಪಾಲಿಷ್ ಮಾಡಲಾಗುತ್ತದೆ. ಈ ಜುವೆಲ್ಲರ್ಸ್​ಗೆ ನುಗ್ಗಿದ ನಕಲಿ ಪೊಲೀಸರು ದೀಪಾವಳಿ ಹಬ್ಬಕ್ಕೆ ನಕಲಿ‌ ಚಿನ್ನ ಮಾರಾಟ ಮಾಡುತ್ತಿದ್ದೀರ. ಹೀಗಾಗಿ, ನಿಮ್ಮ ಅಂಗಡಿ ಮೇಲೆ ರೇಡ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ನಂತರ ಆ ಕಳ್ಳರು ಕೊಲ್ಕತ್ತಾದಲ್ಲಿದ್ದ ಜ್ಯುವೆಲರ್ಸ್​ ಮಳಿಗೆಯ ಮಾಲೀಕನಿಗೆ ಫೋನ್ ಮಾಡಿದ್ದರು.

ನಿಮ್ಮ ಅಂಗಡಿಯನ್ನು ರೇಡ್ ಮಾಡಿದ್ದೇವೆ. ಕೂಡಲೇ ಪೊಲೀಸ್ ಠಾಣೆಗೆ ಬನ್ನಿ ಎಂದಿದ್ದರು. ಆ ಮಾತನ್ನು ನಂಬಿ ಕೊಲ್ಕತ್ತಾದಿಂದ ಬಂದ ಜ್ಯುವೆಲರ್ಸ್​ ಮಾಲೀಕ ಕಾರ್ತಿಕ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ವಿಚಾರಿಸಿದ್ದರು. ಆದರೆ, ಪೊಲೀಸರು ಆ ರೀತಿ ಯಾವ ರೇಡ್ ಕೂಡ ನಡೆದಿಲ್ಲ ಎಂದಿದ್ದರು. ಆಗ ಅನುಮಾನದಿಂದ ಅಂಗಡಿಗೆ ಹೋಗಿ ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಗೀತಾ ಜ್ಯುವೆಲರ್ಸ್​ನಿಂದ 800 ಗ್ರಾಂನಷ್ಟು ಚಿನ್ನಾಭರಣಗಳನ್ನು ಕಳವು ಮಾಡಿ, ನಕಲಿ ಪೊಲೀಸರು ಪರಾರಿಯಾಗಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನಕಲಿ ಪೊಲೀಸ್ ವೇಷಧಾರಿಗಳನ್ನು ಹಲಸೂರು ಗೇಟ್ ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಇನ್ನಿಬ್ಬರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments