Friday, May 14, 2021
No menu items!
Home Karnataka ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ನಿಧನ

ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ನಿಧನ

ಬೆಂಗಳೂರು: ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಅವರು ಮಂಗಳವಾರ ತಡರಾತ್ರಿ ನಗರದ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ರಾಜ್ಯದಲ್ಲಿ 1972ರಲ್ಲಿ ಮೊದಲ ಬಾರಿಗೆ ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ ಪರಿಪಾಲನೆಗಾಗಿ ಸಾಮಾಜಿಕ ಶೋಷಣೆಗೊಳಪಟ್ಟ ಸಣ್ಣಪುಟ್ಟ ಜಾತಿಗಳ ಭರವಸೆಯ ಹೊಸ ಮುಖಗಳನ್ನು ರಾಜಕೀಯಕ್ಕೆ ಪರಿಚಯಿಸುವ ಕೆಲಸ ಮಾಡಿದ್ದರು. ಈ ಸಮಯದಲ್ಲಿ ಕೋಲಾರ ಜಿಲ್ಲೆಯಿಂದ ಗೆದ್ದು ವಿಧಾನಸೌಧದ ಮೆಟ್ಟಿಲು ಹತ್ತಿದ್ದ ಮೂರು ದಲಿತರ ಪೈಕಿ ರೇಣುಕಾ ರಾಜೇಂದ್ರನ್ ಕೂಡ ಒಬ್ಬರು. ಆಗ ಅವರು ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಶಾಸಕಿಯಾಗಿ ವಿಧಾನಸೌಧ ಪ್ರವೇಶಿಸಿದ್ದರು.

1980ರಲ್ಲಿ ಆರ್.ಗುಂಡೂರಾವ್ ಮುಖ್ಯಮಂತ್ರಿ ಗಾದಿಗೇರಿದಾಗ ಅವರ ಸರ್ಕಾರದಲ್ಲಿ ರೇಣುಕಾ ರಾಜೇಂದ್ರನ್ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು.

ಮೃತ ರೇಣುಕಾ ಅವರು ಇಬ್ಬರು ಪುತ್ರರು, ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಅವರ ಪತಿ ರಾಜೇಂದ್ರನ್ ಅವರು ಏಳು ವರ್ಷಗಳ ಹಿಂದೆ ನಿಧನರಾಗಿದ್ದರು. ರೇಣುಕಾ ಅವರ ಅಂತ್ಯಕ್ರಿಯೆ ಚಿಕ್ಕಬಳ್ಳಾಪುರದ ಸೋಲಾಲಪ್ಪ ದಿನ್ನೆ ಬಳಿ ಇರುವ ಅವರ ತೋಟದಲ್ಲಿ ಇಂದು ಸಂಜೆ ನೆರವೇರಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments