ಮೈಸೂರು: ವಿರೋಧ ಪಕ್ಷದ ವಿರೋಧದ ನಡುವೆಯೂ ಬಿಜೆಪಿ ಗೋಹತ್ಯೆ ಹಾಗೂ ಭೂಸುಧಾರಣೆ ಮಸೂದೆ ಅಂಗೀಕರಿಸಿದ್ದು, ಇದಕ್ಕೆ ಜೆಡಿಎಸ್ ಕೂಡ ಬೆಂಬಲ ನೀಡಿದೆ. ಹೀಗಾಗಿ ರೈತ ಸಂಗಟನೆಯವರು ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಕುಮಾರಸ್ವಾಮಿ ಪರ ಬ್ಯಾಟಿಂಗ್ ಬೀಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, ಅವರು ಬಿಜೆಪಿಯ ಕಾಯ್ದೆಯನ್ನು ಬೆಂಬಲಿಸಿದ್ದಾರೆ. ಅವರನ್ನು ಟೀಕೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಬಿಜೆಪಿಯ ಒಳ್ಳೆ ಕೆಲಸಕ್ಕೆ ಅವರು ಬೆಂಬಲಿಸಿದ್ದಾರೆ. ರಾಜಕೀಯ ವಿಚಾರಕ್ಕೆ ಅವರನ್ನು ಟೀಕಿಸುವುದು ಸರಿ ಅಲ್ಲ. ಕುಮಾರಸ್ವಾಮಿ ಅವರು ರೈತರಿಗೆ ಉತ್ತಮ ಕೆಲಸ ಮಾಡಿದ್ದಾರೆ. ರೈತರ ಸಾಲಮನ್ನಾ ಮಾಡಿ ರೈತಪರ ಕಾರ್ಯಕ್ರಮಗಳನ್ನು ಮಾಡಿದ್ದಾರೆ ಎಂದಿದ್ದಾರೆ.
ಕರ್ನಾಟಕದಲ್ಲಿ ಗೋಹತ್ಯೆ ನಿಷೇಧಿಸುವ ಕಠಿಣ ನಿಯಮವನ್ನೊಳಗೊಂಡ ಕರ್ನಾಟಕ ಜಾನುವಾರು ವಧೆ, ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ಜೆಡಿಎಸ್ ಬೆಂಬಲ ನೀಡಿದ್ದು, ಈ ಕುರಿತು ಜೆಡಿಎಸ್ ನಿಲುವಿನ ವಿರುದ್ಧ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ಎಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸಂಸದ ಪ್ರತಾಪ್ ಸಿಂಹ, ಎಚ್ಡಿಕೆ ಪರ ಬ್ಯಾಟಿಂಗ್ ಮಾಡಿದ್ದಾರೆ.