Saturday, June 19, 2021
No menu items!
Home Latest ವಿವೇಕಾನಂದರ ಪ್ರತಿಮೆಯನ್ನು ಪ್ರೇರಣೆಯಾಗಿ ತೆಗೆದುಕೊಳ್ಳುವಂತೆ JNU ವಿದ್ಯಾರ್ಥಿಗಳಿಗೆ ಪ್ರಧಾನಿ ಕರೆ

ವಿವೇಕಾನಂದರ ಪ್ರತಿಮೆಯನ್ನು ಪ್ರೇರಣೆಯಾಗಿ ತೆಗೆದುಕೊಳ್ಳುವಂತೆ JNU ವಿದ್ಯಾರ್ಥಿಗಳಿಗೆ ಪ್ರಧಾನಿ ಕರೆ

ದೆಹಲಿ: ಜವಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ, ಪ್ರತಿಮೆ ಅನಾವರಣದ ನಂತರ ಈ ಪ್ರತಿಮೆಯನ್ನು ಪ್ರೇರಣೆಯಾಗಿ ತೆಗೆದುಕೊಳ್ಳುವಂತೆ ಯುವ ಜನತೆಗೆ ಕರೆ ನೀಡಿದ್ದಾರೆ.
ಯುವಕರು ಅಭಿವೃದ್ಧಿಯ ಪಥದಲ್ಲಿರಬೇಕು ಎನ್ನುವುದು ಸ್ವಾಮಿ ವಿವೇಕಾನಂದರ ನಿರೀಕ್ಷೆಯಾಗಿತ್ತು. ದೇಶದ ಬಗ್ಗೆ ಪ್ರೀತಿ ಮತ್ತು ಸಹಾನುಭೂತಿಯನ್ನು ಹುಟ್ಟಿಸಲು ಪ್ರತಿಮೆ ಪ್ರೇರೇಪಿಸಲಿದೆ. ನಮ್ಮಲ್ಲಿ ಸಮರ್ಪಣಾ ಭಾವ ಹೆಚ್ಚುವಂತಾಗಲಿ ಎಂದು ಅವರು ಹೇಳಿದರು.

‘ಮಹಾತ್ಮ ಗಾಂಧೀಜಿ ಅವರ ಜತೆ ಸೇರಿದಾಗ ಅವರು ತಮ್ಮ ಸಿದ್ಧಾಂತಗಳನ್ನ ಬಿಟ್ಟು ಕೊಡಲಿಲ್ಲ. ನಾನು ಎಮರ್ಜೆನ್ಸಿ ದಿನಗಳನ್ನ ನೋಡಿದ್ದೇನೆ. ಕಾಂಗ್ರೆಸ್ʼನಿಂದ, ಆರ್ ಎಸ್ ಎಸ್ ನಿಂದ ಬಂದ ಅನೇಕ ರಾಜಕೀಯ ನಂಬಿಕೆಗಳ ಜನರು ಇದ್ದರು. ಆದ್ರೆ, ನಾವೆಲ್ಲರೂ ಒಂದೇ ಎನ್ನುವ ಕಾರಣಕ್ಕೆ ನಾವೆಲ್ಲ ಒಂದಾಗಿದ್ದೇವೆ ಎಂದಿದ್ದಾರೆ. ‘ವೈಯಕ್ತಿಕ ಸಿದ್ಧಾಂತಗಳನ್ನ ರಾಷ್ಟ್ರೀಯ ಒಳಿತಿಗೆ ಒತ್ತೆ ಇಡುವುದು ತಪ್ಪು’ ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಜೆಎನ್ ಯು ವಿದ್ಯಾರ್ಥಿಗಳಿಗೆ ಕೆಲವು ಸಲಹೆಗಳನ್ನು ನೀಡಿದರು. ‘ಸ್ಥಾನಮಾನವನ್ನು ಒಪ್ಪಿಕೊಳ್ಳಬೇಡಿ. ಸ್ವಾಮಿ ವಿವೇಕಾನಂದರು ಎಂದಿಗೂ ತಮ್ಮ ಸ್ಥಾನಮಾನವನ್ನ ಒಪ್ಪಿಕೊಳ್ಳಲಿಲ್ಲ. ನಗುವುದನ್ನು ಮರೆಯಬೇಡಿ. ಇಡೀ ಜಗತ್ತಿನ ಭಾರ ಅವರ ಮೇಲೆ ಇದೆ ಎಂದು ನಾನು ಅನೇಕ ವೇಳೆ ಯುವ ಜನರನ್ನ ತುಂಬಾ ಗಂಭೀರವಾಗಿ ನೋಡುತ್ತೇನೆ’ ಎಂದು ಪಿಎಂ ಮೋದಿ ಹೇಳಿದರು.

ಸುಧಾರಣೆಗಳು ಮತ್ತು ರಾಜಕಾರಣದ ಬಗ್ಗೆ ಮಾತನಾಡಿದ ಮೋದಿ, ಉತ್ತಮ ಸುಧಾರಣೆಗಳನ್ನು ಕೆಟ್ಟ ರಾಜಕೀಯ ಎಂದು ಪರಿಗಣಿಸಲಾದ ಕಾಲವಿತ್ತು. ಈ ಬಗ್ಗೆ ಜೆಎನ್ ಯು ವಿದ್ಯಾರ್ಥಿಗಳು ಚರ್ಚೆ ನಡೆಸುವಂತೆ ಒತ್ತಾಯಿಸಿದ ಪ್ರಧಾನಿ, ಉತ್ತಮ ಸುಧಾರಣೆಗಳು ಹೇಗೆ ಉತ್ತಮ ರಾಜಕಾರಣವಾಯಿತು? ಜೆಎನ್ ಯುನಲ್ಲಿ ನೀವು ಈ ಬಗ್ಗೆ ಚರ್ಚೆ ಮಾಡಬೇಕು’ ಎಂದು ಹೇಳಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments