ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1005 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,14,488 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,044ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಕಳೆದ 24 ಗಂಟೆಯಲ್ಲಿ 1,102 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8.88 ಲಕ್ಷ ದಾಟಿದೆ. ರಾಜ್ಯದಲ್ಲಿ ಪ್ರಸ್ತುತ 13,508 ಸಕ್ರಿಯ ಕೊರೋನಾ ಪ್ರಕರಣಗಳಿದ್ದು, ಇದರಲ್ಲಿ 208 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 578 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇದರೊಂದಿಗೆ ಒಟ್ಟು ಸಂಖ್ಯೆ 3,85,586 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 4 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 4287 ಜನ ಮೃತಪಟ್ಟಿದ್ದಾರೆ. 3,72,479 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 8819 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.