Friday, May 14, 2021
No menu items!
Home Karnataka ಕರ್ಪ್ಯೂ ಹಿನ್ನೆಲೆ ;ಶಿವಮೊಗ್ಗದಲ್ಲಿ ಶಾಲಾ -ಕಾಲೇಜುಗಳಿಗೆ ರಜಾ ಘೋಷಣೆ

ಕರ್ಪ್ಯೂ ಹಿನ್ನೆಲೆ ;ಶಿವಮೊಗ್ಗದಲ್ಲಿ ಶಾಲಾ -ಕಾಲೇಜುಗಳಿಗೆ ರಜಾ ಘೋಷಣೆ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಉದ್ವಿಗ್ನವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಬಿಗುವಿನ ವಾತಾವರಣವಿದ್ದು ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗದ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ನಗರದ ಲಷ್ಕರ್ ಮೊಹಲ್ಲಾದಲ್ಲಿ ಭಜರಂಗದಳದ ಸಹ ಸಂಚಾಲಕ ನಾಗೇಶ್ ಎಂಬುವರು ಗುರುವಾರ ಬೆಳಿಗ್ಗೆ ನೆಹರೂ ಕ್ರೀಡಾಂಗಣದಲ್ಲಿ ವಾಕಿಂಗ್ ಮುಗಿಸಿ, ಬೈಕ್ ನಲ್ಲಿ ವಾಪಾಸ್ಸಾಗುವ ವೇಳೆ ಸುಮಾರು ಐವರು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದಾಗಿ ನಾಗೇಶ್ ಮೂಗಿಗೆ ಗಂಭೀರವಾಗಿ ಗಾಯಗೊಂಡಿದ್ದು , ಸ್ಥಳದಿಂದ ತಪ್ಪಿಸಿಕೊಂಡು ಬಂದು, ಆಸ್ಪತ್ರೆಗೆ ದಾಖಲಾಗಿದ್ದರು.

ವಿಷಯ ತಿಳಿಯುತ್ತಿದ್ದಂತೆ ಬಂಜರಂಗದಳ ಸಂಘಟನೆ ಮುಖಂಡರು ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆ ನಡೆಯುತ್ತಿದ್ದಂತೆ ನಗರದಲ್ಲಿ ಕಿಡಿಗೇಡಿಗಳು ಕಸ್ತೂರಿ ಬಾ ರಸ್ತೆಯಲ್ಲಿ ನಿಂತಿದ್ದ ಮಾರುತಿ ಕಾರಿಗೆ ಬೆಂಕಿ ಹಚ್ಚಿದ್ದಾರೆ.

ಈ ಘಟನೆ ಎರಡು ಕೋಮುಗಳ ನಡವಿನ ಉದ್ವಿಗ್ನತೆಗೆ ಕಾರಣವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನದಿಂದ ಶನಿವಾರ ಬೆಳಗ್ಗೆ 10 ಗಂಟೆವರೆಗೆ ಸೆಕ್ಷನ್​ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಘಟನೆಯ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಸದ ಬಿವೈ ರಾಘವೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ನಾಗೇಶ್​ ಆರೋಗ್ಯ ವಿಚಾರಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments