ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 31,118 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಕೊರೋನಾ ವೈರಸ್ ಮಹಾಮಾರಿಗೆ 482 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಮಾಹಿತಿ ಬಿಡುಡೆ ಮಾಡಿದ್ದು ದೇಶಾದ್ಯಂತ ಕೊರೋನಾ ಪ್ರಕರಣಗಳ ಸಂಖ್ಯೆ 94,62,810ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 482 ಮಂದಿ ಬಲಿಯಾಗುವ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 1,37,621 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 41,985 ಮಂದಿ ಸೋಂಕಿನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ 88,89,585 ಮಂದಿ ಕೊರೋನಾ ಸೋಂಕಿನಿಂದ ಮುಕ್ತಿ ಪಡೆದಿದ್ದಾರೆ.
ಇನ್ನು ವಿಶ್ವದಾದ್ಯಂತ 6,35,84,870 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 14,73,746 ಜನರು ಪ್ರಾಣ ಬಿಟ್ಟಿದ್ದಾರೆ. ಜಗತ್ತಿನಲ್ಲಿ ಈವರೆಗೂ 4,39,80,327 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.