ನವದೆಹಲಿ : ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 44,489 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದು 524 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 92,66,706 ಕ್ಕೆ ಏರಿಕೆಯಾಗಿದೆ. ಇಂದು 525 ಮಂದಿ ಮೃತಪಟ್ಟಿದ್ದು ಮೃತರ ಸಂಖ್ಯೆ 1,35,223ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ 36,367 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಒಟ್ಟು ಸೋಂಕಿತರ ಪೈಕಿ ಶೇ.93ಕ್ಕೂ ಹೆಚ್ಚು ಅಂದರೆ 86,79,138 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 4,52,344 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 10,90,238 ಸ್ಯಾಂಪಲ್ಸ್ ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 13,59,31,545 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.