Thursday, May 13, 2021
No menu items!
Home Entertainment ( Kan ) ರಾವಣನ ಬಗ್ಗೆ ಹೇಳಿಕೆ: ಕ್ಷಮೆಯಾಚಿಸಿದ ಸೈಫ್

ರಾವಣನ ಬಗ್ಗೆ ಹೇಳಿಕೆ: ಕ್ಷಮೆಯಾಚಿಸಿದ ಸೈಫ್

ಬಾಲಿವುಡ್ ನಟ ಸೈಫ್ ಅಲಿಖಾನ್ ರಾವಣನ ಬಗ್ಗೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಅದಕ್ಕೆ ನಟ ಕ್ಷಮೆ ಕೇಳಿ, ಆ ಹೇಳಿಕೆ ವಾಪಾಸ್ ತೆಗೆದುಕೊಂಡಿದ್ದಾರೆ.

ಆದಿಪುರುಷ್ ಸಿನಿಮಾದಲ್ಲಿ ಸೈಫ್ ರಾವಣನಾಗಿ ಆರ್ಭಟಿಸುತ್ತಿದ್ದಾರೆ. ಡಿಸೆಂಬರ್ 5 ರಂದು ನಡೆದ ಸಂದರ್ಶನವೊಂದರಲ್ಲಿ ಸಿನಿಮಾ ಬಗ್ಗೆ ಮಾತನಾಡಿದ್ದ ಸೈಫ್ ಅಲಿ ಖಾನ್, ರಾವಣನ ಪಾತ್ರ ನಿರ್ವಹಿಸಲು ಉತ್ಸುಕನಾಗಿದ್ದೇನೆ, ವಿಲನ್ ಎಂದು ಹೇಳುವುದಕ್ಕಿಂತಲೂ ತಾನು ನಂಬಿದ್ದಕ್ಕಾಗಿ ಹೋರಾಡಿದವನು. ರಾವಣನನ್ನು ವಿಲನ್ ಆಗಿ ತೋರಿಸುವ ಬದಲಿಗೆ ಆತನ ಒಟ್ಟಾರೆ ಗುಣವನ್ನ ತೆರೆ ಮೇಲೆ ತರಲಿದ್ದಾರೆ. ರಾಕ್ಷಸ ರಾಜನ ಪಾತ್ರ ವಹಿಸುವುದು ಆಸಕ್ತಿದಾಯಕವಾಗಿದೆ ಅಂತಾ ಹೇಳಿದ್ದರು. ರಾವಣ ಕೂಡ ಒಳ್ಳೆಯವನೇ ಎಂದು ಸಿನಿಮಾದಲ್ಲಿ ತೋರಿಸಲಾಗಿದೆ ಎಂದಿದ್ದರು. ಇದಕ್ಕೆ ಕೆಲವರು ತೀವ್ರ ವಿರೋಧವನ್ನ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಮಾತನಾಡಿರುವ ಸೈಫ್, ಸಂದರ್ಶನವೊಂದರಲ್ಲಿ ನಾನು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ನಾನು ಆಡಿದ ಆ ಮಾತುಗಳು ಜನರ ಭಾವನೆಗಳಿಗೆ ಘಾಸಿಯಾಗಿದೆ ಎಂದು ತಿಳಿದುಬಂದಿದೆ. ಜನರಿಗೆ ನೋವುಂಟು ಮಾಡುವ ಉದ್ದೇಶ ನನ್ನದಾಗಿರಲಿಲ್ಲ. ನಾನು ಎಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಮತ್ತು ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ.

ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾದ ಮುಖ್ಯಭೂಮಿಕೆಯಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಈ ಸಿನಿಮಾವು ರಾಮಾಯಣ ಆಧಾರಿತವಾಗಿದೆ. ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸುತ್ತಿದ್ರೆ, ರಾವಣನ ಪಾತ್ರದಲ್ಲಿ ಬಾಲಿವುಡ್​ನ ಖ್ಯಾತ ನಟ ಸೈಫ್ ಅಲಿ ಖಾನ್ ಬಣ್ಣ ಹಚ್ಚಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments