Wednesday, October 27, 2021
No menu items!
Home Latest ಸಂಪತ್ ರಾಜ್ ಹೀಗೇಕೆ ಮಾಡಿದರು: ಅಖಂಡ ಶ್ರೀನಿವಾಸ್ ಮೂರ್ತಿ

ಸಂಪತ್ ರಾಜ್ ಹೀಗೇಕೆ ಮಾಡಿದರು: ಅಖಂಡ ಶ್ರೀನಿವಾಸ್ ಮೂರ್ತಿ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಖಂಡ ಶ್ರೀನಿವಾಸ್ ಮೂರ್ತಿ, ನನಗೆ ವೈಯುಕ್ತಿಕವಾಗಿ ಯಾರೊಂದಿಗೂ ದ್ವೇಷವಿಲ್ಲ, ಅಂತ ರಾಜಕಾರಣ ಮಾಡುವ ಅನಿವಾರ್ಯತೆ ನನಗಿಲ್ಲ, ಹೀಗಿರುವಾಗ ಸಂಪತ್ ರಾಜ್ ಹೀಗೇಕೆ ಮಾಡಿದರು ಎಂದು ಇಂದಿಗೂ ಅರ್ಥವಾಗುತ್ತಿಲ್ಲ ಎಂದು ಅಖಂಡ ಶ್ರೀನಿವಾಸ್ ಹೇಳಿದ್ದಾರೆ.

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕ ಜಮೀರ್ ಅಹಮದ್ ಅವರು ತಮಗೆ ಬೆಂಬಲ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಂತೆ ಮನವಿ ಮಾಡುತ್ತೇನೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಹೇಳಿದರು.

ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ ಅವರ ಬಲಗೈ ಬಂಟರಾದ ಸಂತೋಷ್ ಮತ್ತು ಅರುಣ್ ಆರೋಪಿಗಳಾಗಿ ಬಂಧಿತರಾಗಿದ್ದಾರೆ. ಅವರಿದ್ದ ಮೇಲೆ ಸಂಪತ್ ರಾಜ್ ಅವರ ಪಾತ್ರ ಇದ್ದೇ ಇರುತ್ತದೆ. ನನ್ನನ್ನು ಪುಲಕೇಶಿನಗರ ಕ್ಷೇತ್ರದ ಜನ ರಾಜ್ಯದಲ್ಲೇ ಅತ್ಯಧಿಕ ಮತಗಳನ್ನು ನೀಡಿ ಆಯ್ಕೆ ಮಾಡಿದ್ದಾರೆ. ನಾನು ಕ್ಷೇತ್ರದಲ್ಲಿ ಯಾವತ್ತೂ ದ್ವೇಷದ ರಾಜಕೀಯ ಮಾಡಿದವನಲ್ಲ. ಏಳು ಮಂದಿ ಬಿಬಿಎಂಪಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿಸುತ್ತಿದ್ದೇನೆ. ಸಂಪತ್ರಾಜ್ ಅವರು ನನ್ನ ಜತೆ ಓಡಾಡುತ್ತಾ, ಮಾತನಾಡಿಕೊಂಡು ಚೆನ್ನಾಗಿದ್ದರು. ಆದರೆ, ಯಾವ ಕಾರಣಕ್ಕಾಗಿ ಈ ರೀತಿ ಮಾಡಿದರು ಗೊತ್ತಿಲ್ಲ ಎಂದರು.

ಒಂದು ವೇಳೆ ಅವರು ನಿರಪರಾಧಿಯೇ ಆಗಿದ್ದರೆ ಆಸ್ಪತ್ರೆಯಿಂದ ತಲೆಮರೆಸಿಕೊಂಡು ಹೋಗಿದ್ದೇಕೆ ? ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರ ಮುಂದೆ ನೇರವಾಗಿ ಹಾಜರಾಗಬಹುದಿತ್ತು. ಅದನ್ನು ಬಿಟ್ಟು ಪರಾರಿಯಾಗಿದ್ದರು. ಗಲಭೆಯಲ್ಲಿ ಸಾಕಷ್ಟು ಹಾನಿಯಾಗಿದೆ. ನಾಲ್ಕು ಮಂದಿ ಅಮಾಯಕರು ಸತ್ತಿದ್ದಾರೆ. ಬಹಳಷ್ಟು ಮಂದಿ ಅಮಾಯಕರು ಜೈಲಿನಲ್ಲಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಮಾಯಕರನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದರು.

ತಪ್ಪು ಯಾರೇ ಮಾಡಲಿ ಅವರಿಗೆ ಶಿಕ್ಷೆಯಾಗಬೇಕು. ಕಾನೂನು ಎಲ್ಲರಿಗೂ ಅನ್ವಯವಾಗಬೇಕು, ಇದಕ್ಕೆ ನಮ್ಮ ಪಕ್ಷದವರೂ ಹೊರತಲ್ಲ ಎಂದ ಅಖಂಡ ಶ್ರೀನಿವಾಸ್, ಪಕ್ಷ ನನ್ನ ವಿಚಾರದಲ್ಲಿ ನ್ಯಾಯಯುತವಾಗಿ ನಡೆದುಕೊಳ್ಳುತ್ತದೆ ಎಂದು ಹೇಳಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments