Monday, June 14, 2021
No menu items!
Home Entertainment ( Kan ) ಅಮೆರಿಕಕ್ಕೆ 'ಅಮೃತಮತಿ'

ಅಮೆರಿಕಕ್ಕೆ ‘ಅಮೃತಮತಿ’

ದಿಮೂರನೇ ಶತಮಾನದ ಜನ್ನಕವಿ ಬರೆದಿರುವ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿ ಬರಗೂರು ರಾಮಚಂದ್ರಪ್ಪನವರ ನಿರ್ದೇಶನದಲ್ಲಿ ಮರು ಸೃಷ್ಟಿ ಮಾಡಿರುವ ಕನ್ನಡ ಚಿತ್ರ ‘ಅಮೃತಮತಿ’ಯು ಅಮೆರಿಕದ ಬೋಸ್ಟನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಪ್ರಪಂಚದ ವಿವಿಧ ದೇಶಗಳ ಚಿತ್ರಗಳ ಜೊತಗೆ ಹೊಸ ಭಾರತೀಯ ಚಿತ್ರಗಳಿಗೆ ಹೆಚ್ಚು ಅವಕಾಶ ಕೊಡುವ ಕಾರಣದಿಂದ ಈ ಚಿತ್ರೋತ್ಸವವನ್ನು ‘ಇಂಡಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವ’ ಎಂದು ಹೆಸರಿನಿಂದ ನಡೆಸಲಾಗುತ್ತಿರುವುದು ವಿಶೇಷ.

‘ಅಮೃತಮತಿ’ ಕನ್ನಡ ಚಿತ್ರವು ಈಗಾಗಲೇ ನೋಯ್ಡಾ, ಆಸ್ಟ್ರಿಯಾ ಮತ್ತು ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿದ್ದು ಬೋಸ್ಟನ್ ಚಿತ್ರೋತ್ಸವವು ನಾಲ್ಕನೆಯದಾಗಿದೆ. ನೋಯ್ಡಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಮೃತಮತಿ ಪಾತ್ರ ನಿರ್ವಹಣೆಗಾಗಿ ಬಹುಭಾಷಾನಟಿ ಹರಿಪ್ರಿಯ ಉತ್ತಮನಟಿ ಪ್ರಶಸ್ತಿಗೆ ಭಾಜನರಾಗಿದ್ದರು. ಈ ಚಿತ್ರದಲ್ಲಿ ಹರಿಪ್ರಿಯ ಅವರಲ್ಲದೆ ಬಹುಭಾಷಾ ನಟ ಕಿಶೋರ್, ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್, ವತ್ಸಲಾ ಮೋಹನ್, ಸುಪ್ರಿಯಾ ರಾವ್, ಅಂಬರೀಶ್ ಸಾರಾಗಿ ಮುಂತಾದವರು ಅಭಿನಯಿಸಿದ್ದಾರೆ.

ನಿರ್ದೇಶನದ ಜೊತೆಗೆ ಬರಗೂರರು ಚಿತ್ರಕತೆ, ಸಂಭಾಷಣೆ ಮತ್ತು ಮೂರು ಹಾಡುಗಳನ್ನು ಬರೆದಿದ್ದು ಎರಡು ಜನಪದ ಗೀತೆಗಳನ್ನು ಬಳಸಲಾಗಿದೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಮೂಲಕ ಪುಟ್ಟಣ್ಣನವರು ನಿರ್ಮಿಸಿರುವ ಈ ಚಿತ್ರಕ್ಕೆ ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ನಟ್ರಾಜ್ ಶಿವು ಮತ್ತು ಪ್ರವೀಣ್ ಸಹ ನಿರ್ದೇಶನವಿದೆ.

News In Brief: Amruthamati Kannada Movie for Boston International Film Festival.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments