Thursday, August 5, 2021
No menu items!
Home Bharata ಇಂದಿನಿಂದ ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನ, ಕೊರೊನಾ ವರದಿ ಕಡ್ಡಾಯ…!!

ಇಂದಿನಿಂದ ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನ, ಕೊರೊನಾ ವರದಿ ಕಡ್ಡಾಯ…!!

ತಿರುವನಂತಪುರಂ: ಶಬರಿ ಮಲೆ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರ ಸ್ಥಳ .ಕೊರೋನಾ ಹಿನ್ನೆಲೆಯಲ್ಲಿ 6 ತಿಂಗಳು ಮುಚ್ಚಿದ್ದ ಕ್ಷೇತ್ರದ ಅಯ್ಯಪ್ಪ ಸ್ವಾಮಿ ದೇಗುಲದ ದ್ವಾರ ಇಂದು ಸಂಜೆ ತೆರೆಯಲಿದೆ. ತಿಂಗಳ ಪೂಜೆ ಹಿನ್ನೆಲೆ ಐದು ದಿನಗಳ ಕಾಲ ದೇವಾಲಯದ ತೆರೆದಿರುತ್ತದೆ. .

ಕೋವಿಡ್ 19 ಹಿನ್ನೆಲೆಯಲ್ಲಿ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆಯುವವರು ಕೊರೋನಾ ವರದಿ ತರುವುದು ಕಡ್ಡಾಯವಾಗಿದೆ .ಈಗಾಗಲೇ ದೇವಸ್ವಂ ಮಂಡಳಿ ಸೂಚಿಸಿರುವಂತೆ ಒಂದು ದಿನ ಕೇವಲ 250 ಭಕ್ತರಿಗಷ್ಟೇ ದರ್ಶನ ಪಡೆಯಲು ಅವಕಾಶ ಸಿಗಲಿದೆ. ಅಲ್ಲದೇ 24 ಗಂಟೆಯೊಳಗಿನ ಕೊರೊನಾ ವರದಿಯನ್ನಷ್ಟೇ ಪರಿಗಣಿಸಲಾಗುವುದೆಂದು ದೇವಸ್ಥಾನ ಮಂಡಳಿ ತಿಳಿಸಿದೆ.

ಇದರ ಜೊತೆಗೆ ಹೊರ ರಾಜ್ಯದಿಂದ ಆಗಮಿಸುವವರು ಕೊರೊನಾ ಪ್ರಮಾಣಪತ್ರ ತಂದಿದ್ದರೂ ಕೂಡ ನೀಲಕ್ಕಲ್ ಅಥವಾ ಪಂಪಾದಲ್ಲಿ ಮತ್ತೊಮ್ಮೆ ಅವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೂಡ ದೇವಸ್ವಂ ಬೋರ್ಡ್ ತಿಳಿಸಿತ್ತು.

ಇನ್ನು ದೇವಾಲಯಕ್ಕೆ ಬರುವ ಯಾತ್ರಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಬೇಕೋ? ಬೇಡವೋ ಎಂಬ ಬಗ್ಗೆ ಗೊಂದಲ ಮುಂದುವರಿದಿದೆ. ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ಕಡಿದಾದ ಬೆಟ್ಟಗಳನ್ನು ಹತ್ತಬೇಕಿದೆ. ಮಾಸ್ಕ್ ಧರಿಸುವುದರಿಂದ ಭಕ್ತರು ಸುಸ್ತಾಗಿ ಉಸಿರಾಟದ ತೊಂದರೆ ಅನುಭವಿಸುತ್ತಾರೆ. ಹೀಗಾಗಿ ಮಾಸ್ಕ್ ಮಾಡಿದರೆ ಸಮಸ್ಯೆಯಾಗಲಿದೆ ಎಂದು ವೈದ್ಯಕೀಯ ಪರಿಣಿತರು ಹೇಳಿದ್ದರು. ಆದರೆ ಈ ಬಗ್ಗೆ ಇನ್ನು ನಿರ್ಧಾರ ಪ್ರಕಟವಾಗಿಲ್ಲ.

ಇನ್ನು ಇಂದು ಸಂಜೆ ದೇವಾಲಯ ತೆರೆದರು ಭಕ್ತರಿಗೆ ಶನಿವಾರ ಮುಂಜಾನೆ ಐದು ಗಂಟೆಯಿಂದ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ದೇವಸ್ಥಾನ ವ್ಯವಸ್ಥಾಪನ ಮಂಡಳಿ ತಿಳಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments