Wednesday, October 27, 2021
No menu items!
Home Karnataka ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಮಗು ಸಾವು..!

ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಮಗು ಸಾವು..!

ಬೆಂಗಳೂರು : ಮಕ್ಕಳನ್ನ ತುಂಬಾ ಹುಷಾರಾಗಿ ನೋಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಯಾಕಂದ್ರೆ ಮೊನ್ನೆ ಮೊನ್ನೆಯಷ್ಟೆ ಮಗುವೊಂದು ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಆ ಮಗುವಿನ ಸಾವಿಗೆ ರಾಜ್ಯದ ಜನತೆ ಕಂಬನಿ ಮಿಡಿದಿದ್ದರು. ಎಲ್ಲಾ ಪೋಷಕರು ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿ ಎಂಬ ಸಂದೇಶವು ಸಾಮಾಜಿಕ ಜಾಲತಾನದಲ್ಲಿ ಹರಿದಾಡಿತ್ತು. ಆದ್ರೆ ಮತ್ತೆ ಅಂಥದ್ದೆ ಕೆಟ್ಟ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಇಂದು ಬೆಳಗ್ಗೆ 8.30 ರ ಸಮಯದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ನ ಗುಂಡಿಗೆ ಬಿದ್ದ 2 ವರ್ಷದ ಮಗು ವಿನೋದ್ ತೀವ್ರವಾಗಿ ಗಾಯಗೊಂಡಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಕೊಪ್ಪಳ ಮೂಲದವರಾದ ಪೋಷಕರು ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲೇ ಶೆಡ್ನಲ್ಲಿ ವಾಸವಾಗಿದ್ದರು. ಮಗುವಿನ ತಂದೆ ಬಿಜಿಎಸ್ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು.

ಕೆಂಗೇರಿಯ ಕೋಡಿಪಾಳ್ಯದಲ್ಲಿ ರಮೇಶ್ ಎಂಬಾತನಿಂದ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು. ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 6 ಅಡಿ ಹೊಂಡ ತೋಡಲಾಗಿತ್ತು. ಆ ಗುಂಡಿಯಲ್ಲಿ ಮಳೆಯಿಂದ ನೀರು ತುಂಬಿಕೊಂಡಿತ್ತು. ಆ ಗುಂಡಿಗೆ ಅಡ್ಡಲಾಗಿ ಏನೂ ಇಟ್ಟಿರಲಿಲ್ಲ. ಅದರ ಸುತ್ತಲೂ ಆಟವಾಡುವ ಸಮಯದಲ್ಲಿ 2 ವರ್ಷದ ಮಗು ವಿನೋದ್ ಕುಮಾರ್ ಗುಂಡಿಗೆ ಬಿದ್ದಿದ್ದ. ಇಂದು ಬೆಳಗ್ಗೆ ತಂದೆ ಕೆಲಸಕ್ಕೆ ತೆರಳಿದ್ದು, ತಾಯಿ ಸ್ನಾನ ಮಾಡುತ್ತಿದ್ದ ಸಮಯದಲ್ಲಿ ಮಗು ಆಟವಾಡುತ್ತಾ ಗುಂಡಿ ಬಳಿ ಹೋಗಿ ಬಿದ್ದಿದೆ

ವಿಷಯ ಗೊತ್ತಾದ ಕೂಡಲೆ ಮಗುವಿನ ಪೋಷಕರು ಮಗುವನ್ನು ಎತ್ತಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ನೀರಿನಲ್ಲಿ ಮುಳುಗಿದ್ದರಿಂದ ಮಗುವಿನ ಜೀವ ಹೋಗಿತ್ತು. ಕಟ್ಟಡ ನಿರ್ಮಿಸುತ್ತಿದ್ದ ರಮೇಶ್ ವಿರುದ್ಧವೂ ಕೇಸ್ ದಾಖಲಿಸಿಕೊಳ್ಳಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments