Saturday, May 15, 2021
No menu items!
Home Karnataka ಬೆಂಗಳೂರು ಅಗ್ನಿ ಅವಘಡದಿಂದ 350 ಕೋಟಿ ನಷ್ಟ..!

ಬೆಂಗಳೂರು ಅಗ್ನಿ ಅವಘಡದಿಂದ 350 ಕೋಟಿ ನಷ್ಟ..!

ಬೆಂಗಳೂರು: ನಗರದ ಹೊಸ ಗುಡ್ಡದಹಳ್ಳಿಯಲ್ಲಿರುವ ರೇಖಾ ಕಡಮಿಕಲ್ ಕಾರ್ಖಾನೆಯಲ್ಲಿ ನಿನ್ನೆ ಬೆಂಕಿ ಹೊತ್ತಿಕೊಂಡಿದ್ದು, ಹತೋಟಿಗೆ ತರುವಲ್ಲಿ ಅಗ್ನಿಶಾಮಕ ದಳ ಹರಸಾಹಸ ಪಟ್ಟಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಅಕ್ಕಪಕ್ಕದ ಮನೆಯವರ ವಸ್ತುಗಳು ಭಸ್ಮವಾಗಿದೆ. ಕಾರುಗಳು, ಬೈಕ್, ಮನೆಯ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಗೆ ಹೆದರಿ ಅಕ್ಕಪಕ್ಕದ ಮನೆಯವರನ್ನ ಶಿಫ್ಟ್ ಮಾಡಲಾಗಿದೆ. ಈ ಘಟನೆಯಿಂದ ಆಗಿರುವ ನಷ್ಟ ಕೇಳಿದ್ರೆ ಶಾಕ್ ಆಗದೆ ಇರದು.

ಘಟನೆ ನಡೆದ ಸ್ಥಳಕ್ಕೆ ಇಂದು ಗೃಹಸಚಿವ ಬಸವರಾಜ್ ಬೊಮ್ಮಾಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇಟಿ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಗೃಹಸಚಿವರು, ತುಂಬಾ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸುಲಭವಾಗಿ ಹೊತ್ತಿಕೊಳ್ಳಬಹುದಾದಂತ ಕೆಮಿಕಲ್ ಗಳನ್ನು ಫ್ಯಾಕ್ಟರಿ ಒಳಗೆ ಇರಿಸಲಾಗಿದೆ. ಅವು ಒಮ್ಮೆಲೆ ಸ್ಪೋಟಗೊಂಡ ಕಾರಣ ಇಂಥ ದೊಡ್ಡ ಅನಾಹುತವಾಗಿದೆ. ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ಸಿಬ್ಬಂದಿಗಳಲ್ಲಿ 11 ಮಂದಿಗೆ ಗಾಯವಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಸುಮಾರು 25ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಲ್ಲಿ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಜನ ವಸತಿ ಸ್ಥಳದಲ್ಲಿ ಕೆಮಿಕಲ್ ಫ್ಯಾಕ್ಟರಿ ತೆರೆಯಲು ಅನುಮತಿ ಕೊಟ್ಟವರು ಯಾರು..? ಯಾವ ಇಲಾಖೆ, ಅಧಿಕಾರಿಗಳ ನಿರ್ಲಕ್ಷ್ಯ ಇದರಲ್ಲಿದೆ ಎಂಬುದನ್ನು ಪರಿಶೀಲಿಸಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಾಥಮಿಕ ತನಿಖೆಯಿಂದ ಸುಮಾರು 350 ಕೋಟಿ ನಷ್ಟವಾಗಿದೆ ಎಂಬುದು ತಿಳಿದು ಬಂದಿದೆ. ನಷ್ಟವನ್ನೆಲ್ಲಾ ಫ್ಯಾಕ್ಟರಿ ಮಾಲೀಕರಿಂದಲೇ ಭರಿಸಲಾಗುವುದು ಎಂದು ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments