Friday, May 14, 2021
No menu items!
Home Karnataka ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಯಿಂದ ಉಚ್ಚಾಟನೆ…?

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಯಿಂದ ಉಚ್ಚಾಟನೆ…?

ಬೆಂಗಳೂರು : ಕೆಲ ದಿನಗಳ ಹಿಂದೆ ಸಿ.ಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧವಾಗಿ ಮಾತನಾಡಿ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟುಮಾಡಿದ ಹಿನ್ನೆಲೆಯಲ್ಲಿ , ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಜ್ಯ ಬಿಜೆಪಿಯಿಂದ ಉಚ್ಚಾಟನೆ ಮಾಡಲು ಚಿಂತನೆ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ” ಸಿಎಂ ಬಿಎಸ್ವೈ ಅವರು ಹೆಚ್ಚು ದಿನ ಅಧಿಕಾರದಲ್ಲಿ ಇರುವುದಿಲ್ಲ” ಎಂದು ಕಳೆದ ಸೋಮವಾರ ಓಪನ್ ಸ್ಟೇಟ್ ಮೆಂಟ್ ನೀಡಿದ್ದರು. ಇದರಿಂದ ತೀವ್ರ ಮುಜುಗರಕ್ಕೀಡಾಗಿರುವ ರಾಜ್ಯ ಬಿಜೆಪಿ , ಪಕ್ಷದಲ್ಲಿದ್ದುಕೊಂಡು ಅಶಿಸ್ತು ತೋರಿಸಿದ್ದಕ್ಕಾಗಿ , ಶಿಸ್ತು ಕ್ರಮದ ಹಿನ್ನೆಲೆಯಲ್ಲಿ ಯತ್ನಾಳ್ ಅವರನ್ನು ರಾಜ್ಯ ಬಿಜೆಪಿಯಿಂದ ಕೈಬಿಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಪಕ್ಷ ಯಾವತ್ತಿಗೂ ಅಶಿಸ್ತನ್ನು ಸಹಿಸುವುದಿಲ್ಲ, ಅಶಿಸ್ತು ಪ್ರದರ್ಶಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಗುಡುಗಿದ್ದಾರೆ.

ಒಟ್ಟಿನಲ್ಲಿ ಪದೇ ಪದೇ ತಮ್ಮ ವರಸೆಗಳಿಂದ ತಮ್ಮದೇ ಪಕ್ಷವನ್ನು ಜರಿಯುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂದೆಡೆಯಾದರೆ, ಬಿಜೆಪಿ ಸಾರಥಿ ನಳಿನ್ ಕುಮಾರ್ ಕಟೀಲ್ ಅವರು ಶಿಸ್ತು ಮತ್ತು ಆಶಿಸ್ತಿನ ಬಗೆಯಾಗಿ ಮಾತನಾಡಿದ ಮಾತುಗಳು ಯತ್ನಾಳ್ ಅವರಿಗೆ ರಾಜ್ಯ ಬಿಜೆಪಿಯಲ್ಲಿ ಬಹುದಿನಗಳ ಉಳಿಗಾಲವಿಲ್ಲ ಎಂಬ ಸಂದೇಶ ಎಂದು ರಾಜಕೀಯ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments