Monday, June 14, 2021
No menu items!
Home Bharata ಬಿಹಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸೋಲು, ಹಿರಿಯರಿಂದ ರಾಜೀನಾಮೆ..!

ಬಿಹಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸೋಲು, ಹಿರಿಯರಿಂದ ರಾಜೀನಾಮೆ..!

ಬಿಹಾರ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು, ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅಲ್ಲಿನ ಕಾಂಗ್ರೆಸ್ ಹಿರಿಯ ಮುಖಂಡರು ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಮಧನ್ ಮೋಹನ್ ಝಾ ಕೂಡಾ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೆ, ಹೈ ಕಮಾಂಡ್ ಮುಂದಿನ ನಿರ್ದೇಶನಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ. ಬಿಹಾರ ಎಐಸಿಸಿ ಉಸ್ತುವಾರಿ ಶಕ್ತಿಸಿನ್ಹಾ ಗೊಹಿಲ್ ಮತ್ತಿತರ ಮುಖಂಡರು ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಹೈಕಮಾಂಡ್ ಗೆ ಸಲ್ಲಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್ ಸೇರಿದಂತೆ ಅನೇಕ ಮುಖಂಡರು ಇದೇ ರೀತಿಯ ಮಾತುಗಳನ್ನಾಡಿದ್ದಾರೆ. ಬಿಹಾರದಲ್ಲಿ ಪಕ್ಷದ ಸಾಧನೆ ಕುರಿತು ಸಮಗ್ರ ವಿಮರ್ಶೆ ನಡೆಯಬೇಕು ಎಂದು ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 19ರಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಬಗ್ಗೆ ಸಮಗ್ರ ಪರಿಶೀಲನೆಗೆ ಕರೆ ನೀಡಿರುವ ಕಾಂಗ್ರೆಸ್ ಮುಖಂಡರು, ಹೈ-ಕಮಾಂಡ್ನ ನಿರ್ದೇಶನಗಳ ನಂತರ ಈ ಬಗ್ಗೆ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments