Wednesday, June 16, 2021
No menu items!
Home Bharata ಬಿಜೆಪಿ ಪ್ರಣಾಳಿಕೆಯಲ್ಲಿ ಕೊರೊನಾ ಲಸಿಕೆ ಉಚಿತ ವಿಚಾರ : ಪ್ರತಿಪಕ್ಷಗಳ ಪ್ರಶ್ನೆಗೆ ಬಿಜೆಪಿ ಕೊಟ್ಟ ಉತ್ತರ...

ಬಿಜೆಪಿ ಪ್ರಣಾಳಿಕೆಯಲ್ಲಿ ಕೊರೊನಾ ಲಸಿಕೆ ಉಚಿತ ವಿಚಾರ : ಪ್ರತಿಪಕ್ಷಗಳ ಪ್ರಶ್ನೆಗೆ ಬಿಜೆಪಿ ಕೊಟ್ಟ ಉತ್ತರ ಏನು ಗೊತ್ತಾ..?

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ರು. ಅದರಲ್ಲಿ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವ ಬಗ್ಗೆಯೂ ಪ್ರಕಟಿಸಲಾಗಿತ್ತು. ಈ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಬಿಜೆಪಿ ಕೂಡ ಉತ್ತರ ನೀಡಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಎನ್ ಡಿಎ ಮೈತ್ರಿಕೂಟದ ಮುಂದಿನ ಐದು ವರ್ಷಗಳಿಗೆ ಸಂಬಂಧಿಸಿದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. “ಐದು ಸೂಕ್ತ, ಒಂದು ಗುರಿ ಮತ್ತು 19 ಸಂಕಲ್ಪ” ಎಂಬ ಧ್ಯೇಯವಾಕ್ಯವನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದಲ್ಲಿ ರಾಜ್ಯವನ್ನು ಐಟಿ ಹಬ್ ಮಾಡುವುದು. 19 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುವುದು ಸೇರಿದಂತೆ ಹಲವು ಅಂಶಗಳನ್ನು ಸೇರಿಸಲಾಗಿತ್ತು. ಈ ಪೈಕಿ ರಾಜ್ಯದ 7.20 ಲಕ್ಷ ಮತದಾರರನ್ನು ಒಲಿಸಿಕೊಳ್ಳವುದಕ್ಕೆ ಉಚಿತವಾಗಿ ಕೊರೊನಾ ವೈರಸ್ ಲಸಿಕೆ ವಿತರಿಸಲಾಗುತ್ತದೆ ಎಂಬ ಅಂಶ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಾಣ ಉಳಿಸುವ ಲಸಿಕೆಯನ್ನು ರಾಜಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕರು ಟೀಕಾಪ್ರಹಾರ ನಡೆಸಿದ್ದಾರೆ. ಪ್ರಣಾಳಿಕೆಯಲ್ಲಿ ಈ ಅಂಶ ಸೇರಿಸಿರುವುದರ ಹಿಂದಿನ ಉದ್ದೇಶವನ್ನು ಬಿಜೆಪಿ ಇದೀಗ ಸ್ಪಷ್ಟಪಡಿಸಿದೆ.

ಬಿಹಾರ ವಿಧಾನಸಭಾ ಚುನಾವಣಾ ಪ್ರಣಾಳಿಕೆ ಅಂಶಗಳ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಬಿಜೆಪಿಯ ರಾಷ್ಟ್ರೀಯ ಮಾಹಿತಿ ಮತ್ತು ತಂತ್ರಜ್ಞಾನ ಕೋಶದ ಉಸ್ತುವಾರಿ ಅಮಿತ್ ಮಾಳ್ವಿಯಾ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ಜನತೆಗೆ ಉಚಿತವಾಗಿ ಕೊವಿಡ್-19 ಲಸಿಕೆ ವಿತರಿಸಬೇಕು ಎಂಬ ತೀರ್ಮಾನ ಬಿಹಾರ ಬಿಜೆಪಿಗೆ ಸೇರಿದ್ದಾಗಿದೆ. ಬಿಹಾರ ಸರ್ಕಾರವು ಪ್ರಜೆಗಳಿಗೆ ಉಚಿತವಾಗಿ ಲಸಿಕೆ ನೀಡಲು ನಿರ್ಧರಿಸಿದೆ. ಕೇಂದ್ರ ಸರ್ಕಾರ ಎಲ್ಲ ಯೋಜನೆಗಳ ರೀತಿ ನಿಗದಿತ ಬೆಲೆಯಲ್ಲಿ ರಾಜ್ಯಗಳಿಗೆ ಲಸಿಕೆಯನ್ನು ನೀಡುತ್ತದೆ. ತದನಂತರದಲ್ಲಿ ಆ ಲಸಿಕೆಯನ್ನು ಪ್ರಜೆಗಳಿಗೆ ಉಚಿತವಾಗಿ ನೀಡಬೇಕೇ ಅಥವಾ ಕಡಿಮೆ ಬೆಲೆಯಲ್ಲಿ ನೀಡಬೇಕೇ ಎನ್ನುವುದನ್ನು ಆಯಾ ರಾಜ್ಯ ಸರ್ಕಾರಗಳು ತೀರ್ಮಾನಿಸಲಿವೆ ಎಂದು ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments