ಬೆಂಗಳೂರು: ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಶೈಕ್ಷಣಿಕ ಚಟುವಟಿಕೆಗಳನ್ನು ಕಾಲೇಜುಗಳಲ್ಲಿ ನವೆಂಬರ್ 17 ರಿಂದ ಆನ್ ಲೈನ್ ಮತ್ತು ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಆದೇಶಿಸಿದ್ದು, ಕೆಲ ಮಾರ್ಗಸೂಚಿಗಳನ್ನು ನೀಡಿವೆ.
ಈ ಮಾರ್ಗಸೂಚಿಗಳನ್ನು ಅನುಸರಿಸಿ ಕಾಲೇಜುಗಳು ತರಗತಿ ಆರಂಭಿಸಲು ಸಿದ್ಧವಾಗಿವೆ. ಇದೇ ನವೆಂಬರ್ 17ರಂದು ಕಾಲೇಜುಗಳು ಆರಂಭವಾಗಲಿದ್ದು, ಬಿಎಂಟಿಸಿ ವಿದ್ಯಾರ್ಥಿಗಳಿಗೆ ಸಹಿ ಸುದ್ದಿ ಕೊಟ್ಟಿದೆ.
ರಾಜ್ಯದಲ್ಲಿ ನವೆಂಬರ್ 17 ರಿಂದ ಪದವಿ/ಸ್ನಾತಕೋತ್ತರ/ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಾಲೇಜಿನ ಐಡಿ ಕಾರ್ಡ್ ಅಥವಾ ಶುಲ್ಕ ರಸೀದಿ ತೋರಿಸಿ ಉಚಿತ ಪ್ರಯಾಣ ಮಾಡಲು ಅನುವು ಮಾಡಿಕೊಟ್ಟಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 17:11:2020 ರಿಂದ ಬಿಎಂಟಿಸಿ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಕಾಲೇಜಿನವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.