Saturday, May 15, 2021
No menu items!
Home Karnataka ಹಳೆ ದಿನಗಳನ್ನು ಮೆಲುಕು ಹಾಕಿದ ಸಿಎಂ : ಹೋರಾಟದಿಂದಲೇ ಇವತ್ತು ಇಲ್ಲಿದ್ದೇನೆಂದು ಟ್ವೀಟ್

ಹಳೆ ದಿನಗಳನ್ನು ಮೆಲುಕು ಹಾಕಿದ ಸಿಎಂ : ಹೋರಾಟದಿಂದಲೇ ಇವತ್ತು ಇಲ್ಲಿದ್ದೇನೆಂದು ಟ್ವೀಟ್

ಬೆಂಗಳೂರು: ಕೇಂದ್ರ ಸರ್ಕಾರ ಜಾರುಗೆ ತರುತ್ತಿರುವ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕಳೆದ 14 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ ಕೆಲಸ ಸಂಘಟನೆಗಳು, ಬಾಲಿವುಡ್, ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು ಸಹ ಬೆಂಬಲ ವ್ಯಕ್ತಪಡಿಸಿವೆ.

ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ತಮ್ಮ ನೆನಪಿನ ದಿನಗಳಿಗೆ ಜಾರಿದ್ದಾರೆ. ಹೋರಾಟದ ದಿನಗಳ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪ, ಹೋರಾಟದಿಂದಲೇ ನಾನು ಇವತ್ತು ಈ ಸ್ಥಾನದಲ್ಲಿದ್ದೇನೆ. ನಾನೂ ಕೂಡ ರೈತನ ಮಗನಾಗಿದ್ದು, ರೈತರ ಸಂಕಷ್ಟ ತಿಳಿದಿದೆ. ಸದಾಕಾಲ ರೈತಪರವಾಗಿಯೇ ಇರುತ್ತೇನೆ. ನಮ್ಮ ಅನ್ನದಾತ ರೈತರಿಗೆ ಅನ್ಯಾಯವಾಗಲು ನಾನು ಅವಕಾಶ ನೀಡುವುದಿಲ್ಲ. ರೈತರ ಸಂಶಯಗಳನ್ನು ಸರ್ಕಾರ ಪರಿಹರಿಸಲಿದೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ, ನನ್ನ ವಿನಂತಿಯಿಷ್ಟೇ, ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ಯಾರೂ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ರೈತರ ಪ್ರತಿಭಟನೆ ನಡೆಸುತ್ತಿದ್ದರು ಕೇಂದ್ರ ಸರ್ಕಾರ ರೈತರ ಬೇಡಿಕೆಗೆ ಒಪ್ಪಿಗೆ ಸೂಚಿಸಿಲ್ಲ. ಬದಲಿಗೆ ಕಾಯ್ದೆಯಲ್ಲಿ ಮಾರ್ಪಾಡು ಮಾಡುತ್ತೇವೆ ಎಂದಷ್ಟೇ ಹೇಳಿದೆ. ಆದ್ರೆ ಈ ಮಾತಿಗೆ ರೈತರು ಒಪ್ಪಿಗೆ ಸೂಚಿಸಿಲ್ಲ. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ-2020, ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ-2020, ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ-2020 ವಿರೋಧಿಸಿ ದೇಶಾದ್ಯಂತ ಕೆಲ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments