Friday, September 24, 2021
No menu items!
Home Karnataka ರಾಜ್ಯ ಬಿಜೆಪಿಯಿಂದ ಉಪಚುನಾವಣೆಗೆ ಉಸ್ತುವಾರಿಗಳ ನೇಮಕ

ರಾಜ್ಯ ಬಿಜೆಪಿಯಿಂದ ಉಪಚುನಾವಣೆಗೆ ಉಸ್ತುವಾರಿಗಳ ನೇಮಕ

ಬೆಂಗಳೂರು: ನವೆಂಬರ್ 3ರಂದು ಬೆಂಗಳೂರಿನ ಆರ್‌ಆರ್‌ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಯಾಗಿದೆ. ಹೀಗಾಗಿ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಲು ಇಂದು ಕೋರ್ ಕಮಿಟಿ ಸಭೆ ಕರೆದಿತ್ತು. ಈ ಸಭೆಯಲ್ಲಿ ಉಪಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ.

ಬಿಜೆಪಿ ಯಾರಿಗೆ ಏನೆಲ್ಲಾ ಜವಬ್ದಾರಿ ನೀಡಿದೆ ಅನ್ನೋ ಮಾಹಿತಿ ಇಲ್ಲಿದೆ. ಶಿರಾ ಕ್ಷೇತ್ರಕ್ಕೆ ಗೋವಿಂದ ಕಾರಜೋಳ, ಡಿಸಿಎಂ ಅಶ್ವಥ್ ನಾರಾಯಣ್, ಬಿ.ವೈ.ವಿಜಯೇಂದ್ರ, ಎನ್. ರವಿಕುಮಾರ್, ಪಿ ಸಿ ಮೋಹನ್, ಪೂರ್ಣಿಮಾ ಶ್ರೀನಿವಾಸ್ ಅವರನ್ನು ನೇಮಿಸಿದೆ.

ಹಾಗೇ ಆರ್ ಆರ್ ನಗರ ಕ್ಷೇತ್ರಕ್ಕೆ ಅರವಿಂದ ಲಿಂಬಾವಳಿ, ಆರ್ ಅಶೋಕ್, ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್, ಎಸ್ ಆರ್ ವಿಶ್ವನಾಥ್ ಅವರನ್ನು ನೇಮಿಸಿದೆ.

ಇನ್ನು ಅಕ್ಟೋಬರ್ 28ರಂದು ಶಿಕ್ಷಕರ ಹಾಗೂ ಪದವೀಧರ ತಲಾ ಎರಡು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಶಿಕ್ಷಕರ ಆಗ್ನೇಯ ಕ್ಷೇತ್ರಕ್ಕೆ ಜೆ ಸಿ ಮಾಧುಸ್ವಾಮಿ, ಡಾ. ಕೆ ಸುಧಾಕರ್, ಡಾ. ವೈ ಎ ನಾರಾಯಣಸ್ವಾಮಿ, ಶಿವಯೋಗಿಸ್ವಾಮಿ ಅವರನ್ನು ನೇಮಿಸಿದೆ.
ಹಾಗೇ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್, ಅರೆಬೈಲು ಶಿವರಾಂ ಹೆಬ್ಬಾರ್ ರನ್ನು ನೇಮಿಸಿ ಬಿಜೆಪಿ ಆದೇಶ ಹೊರಡಿಸಿದೆ. ಕೋರ್ ಕಮಿಟಿ ಸಭೆ ಬಳಿಕ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments