Tuesday, October 26, 2021
No menu items!
Home Karnataka ನಾಳೆ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ "ಕಾವೇರಿ"

ನಾಳೆ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ “ಕಾವೇರಿ”

ಮಡಿಕೇರಿ; ಸೆ.26 ರಿಂದ ಪತ್ತಾಯಕ್ಕೆ ಅಕ್ಕಿ ಹಾಕುವಲ್ಲಿಂದ ಶುರುವಾಗಿರುವ ಕಾವೇರಿ ತೀರ್ಥೋದ್ಭವದ ಜಾತ್ರೆ ನಾಳೆ ಬೆಳಿಗ್ಗೆ ಮುಕ್ತಾಯವಾಗಲಿದೆ. ನಾಳೆ ಬೆಳಿಗ್ಗೆ 7 ಘಂಟೆ 3 ನಿಮಿಷಕ್ಕೆ ಸರಿಯಾಗಿ ತೀರ್ಥೋದ್ಭವವಾಗಲಿದೆ ಎಂದು ದೇವಸ್ಥಾನ ಮಂಡಳಿ ತಿಳಿಸಿದೆ.

ಜಿಲ್ಲೆಯಲ್ಲಿ ಕೋವಿಡ್ 19 ಕಾಟ ಹಿಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಾಳಿತ ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ . ಪ್ರತೀ ವರ್ಷದಂತೆ ಈ ಬಾರಿ ಕೊಳದಲ್ಲಿ ಸ್ನಾನ ಮಾಡಿ ತೀರ್ಥ ಪ್ರೊಕ್ಷಣೆಗೆ ಅವಕಾಶವಿರುವುದಿಲ್ಲ . ಇನ್ನುಳಿದಂತೆ ಪ್ರತಿಯೊಬ್ಬ ಭಕ್ತರು ಸಾಮಾಜಿಕ ಅಂತರ ಕಾಪಾಡಿಕೊಂಡು ಮತ್ತು ಮಾಸ್ಕ್ ಧರಿಸಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗುವುದು ಕಡ್ಡಾಯವಾಗಿದೆ .

ಅರ್ಚಕ ಗೋಪಾಲ್ ಪೂಜಾರ್ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಲಿದೆ. ಇದೀಗಾಗಲೇ ಜಿಲ್ಲಾಡಾಳಿತ ಮತ್ತು ಸರ್ಕಾರದ ಕೊರೋನಾ ಮಾರ್ಗಸೂಚಿಯಂತೆ ಹಲವು
ಪೂಜಾ ವಿದಿವಿಧಾನಗಳು ನಡೆಯುತ್ತಿವೆ. ಇನ್ನು ನಾಳೆಯ ತೀರ್ಥ ಪ್ರೋಕ್ಷಣೆಗೂ ಸುಮಾರು 40 ಸ್ವಯಂ ಸೇವಕರು ಸಿದ್ದರಿದ್ದು ಅವರೆಲ್ಲರಿಗೂ ಇದೀಗಾಗಲೇ ಕೋವಿಡ್ 19 ಟೆಸ್ಟ್ ನಡೆಸಲಾಗಿದೆ.

ಜಿಲ್ಲೆಯಲ್ಲಿ ಕೊರೋನಾ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಿಲ್ಲಾಡಾಳಿತ ಮತ್ತು ದೇವಸ್ಥಾನ ಮಂಡಳಿಯೊಂದಿಗೆ ಸಹಕರಿಸಬೇಕೆಂದು ದೇವಸ್ಥಾನ ಮಂಡಳಿ ಅಧ್ಯಕ್ಷ ರಾದ ಬಿ.ಎಸ್ ತಿಮ್ಮಯ್ಯ ಮನವಿ ಮಾಡಿಕೊಂಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments