Saturday, May 15, 2021
No menu items!
Home Karnataka ಡಿಕೆ ಸೋದರರ ನಿವಾಸದ ಮೇಲೆ ಸಿಬಿಐ ದಾಳಿ..!

ಡಿಕೆ ಸೋದರರ ನಿವಾಸದ ಮೇಲೆ ಸಿಬಿಐ ದಾಳಿ..!

ಬೆಂಗಳೂರು: ಉಪಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಿಗೆ ಸಿಬಿಐ ಶಾಕ್ ನೀಡಿದೆ. ಶಿವಕುಮಾರ್ ಅವರ ಬೆಂಗಳೂರು ನಿವಾಸವೂ ಸೇರಿದಂತೆ ಅವರಿಗೆ ಸಂಬಂಧಪಟ್ಟ ಹಲವು ಕಡೆಗಳಲ್ಲಿರುವ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಲಾಗಿದೆ.

ಈ ಹಿಂದೆ ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಇಡಿ ಶಿವಕುಮಾರ್ ಅವರನ್ನು ಬಂಧಿಸಿತ್ತು. ಈಗ ಸಿಬಿಐ ಕೂಡಾ ಇದೇ ವಿಚಾರದ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ಕ್ರಮ ಜರುಗಿಸಲು ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆ ಅವರ ಸಹೋದರ ಸಂಸದ ಸುರೇಶ್ ಅವರ ನಿವಾಸದ ಮೇಲೂ ರೇಡ್ ನಡೆಸಲಾಗಿದ್ದು ಹಿಂದಿನ ಪ್ರಕರಣಗಳ ತನಿಖೆ ಸಲುವಾಗಿ ಈ ದಾಳಿ ಸಂಘಟಿಸಿದೆ ಎನ್ನಲಾಗಿದೆ. ತಮ್ಮ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಅವಕಾಶ ಮಾಡಿಕೊಡದಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿಬಿಐ ಆರೋಪದ ಜಾಡಿನಲ್ಲೇ ಸಾಗಿ ಸೋದರರ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದೆ.

ರಾಜಕೀಯ ಲೆಕ್ಕಾಚಾರದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮುಂಜಾನೆ ಆರಕ್ಕೆ ಆರಂಭವಾಗಿರುವ ದಾಳಿ ಸಂಜೆ 6 ಗಂಟೆ ವೇಳೆಗೆ ಅಂತ್ಯವಾಯ್ತು. ಸಿಬಿಐ ಅಧಿಕಾರಿಗಳು ಡಿಕೆಶಿ ನಿವಾಸದಿಂದ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments