Wednesday, October 27, 2021
No menu items!
Home Karnataka ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ: ಅಕೌಂಟ್ ಪರಿಶೀಲನೆಗೆ ಪತ್ನಿ ಕರೆದೊಯ್ದ ಅಧಿಕಾರಿಗಳು

ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ: ಅಕೌಂಟ್ ಪರಿಶೀಲನೆಗೆ ಪತ್ನಿ ಕರೆದೊಯ್ದ ಅಧಿಕಾರಿಗಳು

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ ನಡಸಿದ್ದು ದಾಖಲೆಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಈ ವೇಳೆ ಬೇಗ್ ಒಡೆತನದ ಕಾರನ್ನು ಪರಿಶೀಲನೆ ನಡೆಸಿದ್ದಾರೆ.

ಇಬ್ಬರು ಮಹಿಳಾ ಅಧಿಕಾರಿಗಳು ಸೇರಿ ಒಟ್ಟು 13 ಮಂದಿ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೋಲ್ಸ್ ಪಾರ್ಕ್ನಲ್ಲಿರುವ ರೋಷನ್ ಬೇಗ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮೊದಲಿಗೆ ಸಿಬಿಐ ಅಧಿಕಾರಿಗಳು ಮನೆಯ ಹೊರಗೆ ಮೂಲೆ ಮೂಲೆಯೂ ತಪಾಸಣೆ ಮಾಡಿದ್ದಾರೆ. ಬಳಿಕ ಮನೆಯ ಒಳಗೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಭದ್ರತಾ ಸಿಬ್ಬಂದಿಗೆ ಯಾರನ್ನೂ ಒಳಗೆ ಬಿಡದಂತೆ ಸಿಬಿಐ ಅಧಿಕಾರಿಗಳು ಸೂಚಿಸಿದ್ದಾರೆ. ಜೊತೆಗೆ ಬೇಗ್ ಅವರ ಅಕೌಂಟ್ ಮತ್ತು ಲಾಕರ್ ಗಳ ಬಗ್ಗೆ ಮಾಹಿತಿ ಪಡೆಯಲು ಅಧಿಖಾರಿಗಳು ಬೇಗ್ ಅವರ ಪತ್ನಿಯನ್ನು ಕರೆದೊಯ್ದಿದ್ದಾರೆ. ಅವರ ಮನೆಕೆಲದ ಒಬ್ಬರನ್ನು ಸಹ ಪೊಲೀಸರು ಕರೆದೊಯ್ದಿದ್ದಾರೆ.

ಐಎಂಎ ಕಂಪನಿಯಿಂದ 200 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬಂದ ಆರಂಭಿಕ ದಿನಗಳಲ್ಲಿ ಐಎಂಎ ಸಂಸ್ಥಾಪಕ, ಸಿಇಓ ಮನ್ಸೂರ್ ಖಾನ್ ಅವರೇ ರೋಷನ್ ಬೇಗ್ ಅವರ ಮೇಲೆ ಆರೋಪ ಮಾಡಿದ್ದರು. ಐಎಂಎ ಕಂಪನಿಯಿಂದ ರೋಷನ್ ಬೇಗ್ ಬೇಕಾದಾಗೆಲ್ಲಾ ಹಣ ಪಡೆದಿದ್ದಾರೆ. ಅದನ್ನು ವಾಪಸು ಕೇಳಿದಾಗ ಸ್ಥಳೀಯ ರೌಡಿಗಳಿಂದ ಬೆದರಿಸಿದ್ದರು ಎಂಬ ಅಡಿಯೋ ಅಂದಿನ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರಿಗೆ ಮನ್ಸೂರ್ ಆಲಿಖಾನ್ ಅವರೇ ಕಳಿಸಿಕೊಟ್ಟಿದ್ದರು.

ಐಎಂಎ ಬಹುಕೋಟಿ ವಂಚನೆ ಪ್ರಕರಣದಡಿಯಲ್ಲಿ ಭಾನುವಾರ ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟಿದ್ದರು. ಇಂದು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅಧಿಕಾರಿಗಳು ಅರ್ಜಿ ಸಲ್ಲಿಸಲಿದ್ದಾರೆ. ಬಾಡಿವಾರೆಂಟ್ ಮೇಲೆ ಕಸ್ಟಡಿಗೆ ಪಡೆದು ಸಿಬಿಐ ಅಧಿಕಾರಿಗಳೂ ವಿಚಾರಣೆ ಮಾಡಲಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments