ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಪಕ್ಷದಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ನಿನ್ನೆ ಒಬ್ಬರು ರಾಜೀನಾಮೆ ನೀಡಿದ್ದು, ಇಂದು ಮತ್ತೊಬ್ಬರು ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಮಮತಾ ಬ್ಯಾನರ್ಜಿಗೆ ತಲೆನೋವಾಗಿದೆ ಪರಿಣಮಿಸಿದೆ.
ಸಚಿವ ಸ್ಥಾನಕ್ಕೆ ಮತ್ತು ಶಾಸಕ ಸ್ಥಾನಕ್ಕೆರಾಜೀನಾಮೆ ನೀಡಿದ್ದ ಟಿಎಂಸಿ ಪಕ್ಷದ ಹಿರಿಯ ನಾಯಕ ಸುಭೇಂದು ಅಧಿಕಾರಿ ಅವರು ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಇಂದು ತಿಳಿಸಿದ್ದಾರೆ. ಟಿಎಂಸಿ ಮುಖ್ಯಸ್ಥೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ತಮ್ಮ ರಾಜೀನಾಮೆ ನಿರ್ಧಾರವನ್ನು ತಿಳಿಸಿದ್ದಾರೆ. ಪೂರ್ಬ ಮೇದಿನಿಪುರ್ ಜಿಲ್ಲೆಯ ನಂದೀಗ್ರಾಮ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಸುವೇಂದು ಅವರು ನಿನ್ನೆ ರಾಜೀನಾಮೆ ನೀಡಿದ್ದರು. ಶಾಸಕ ಸ್ಥಾನಕ್ಕೆ ತಮ್ಮ ರಾಜೀನಾಮೆಯನ್ನ ಕೂಡಲೇ ಅಂಗೀಕರಿಸಿ ಎಂದು ಅವರು ಸ್ಪೀಕರ್ ಅವರಿಗ ಪತ್ರ ಬರೆದು ಕೋರಿಕೊಂಡಿದ್ದರು.ಈ ವಾರದ ಕೊನೆಯಲ್ಲಿ ಅವರು ಬಿಜೆಪಿ ಸೇರುವ ನಿರೀಕ್ಷೆಯಿದೆ. ಈ ವಾರದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳಕ್ಕೆ ಆಗಮಿಸಲಿದ್ದು, ಅವರ ಸಮ್ಮುಖದಲ್ಲಿ ಸುಬೇಂದು ಅಧಿಕಾರಿ ಅವರು ಬಿಜೆಪಿ ಸೇರುವ ನಿರೀಕ್ಷೆ ಇದೆ.
ಸಾರಿಗೆ ಮತ್ತು ನೀರಾವರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಸುವೇಂದು ಅಧಿಕಾರಿ ಬಹಳಷ್ಟು ಭಿನ್ನಾಭಿಪ್ರಾಯಗಳನ್ನ ಹೊಂದಿದ್ದರು. ರಾಜ್ಯ ಸಚಿವ ಸಂಪುಟ ಸಭೆಗಳಲ್ಲೂ ಅವರು ಭಾಗವಹಿಸುತ್ತಿರಲಿಲ್ಲ. ಅತ್ತ, ತೃಣಮೂಲ ಕಾಂಗ್ರೆಸ್ ಪಕ್ಷದ ಕಡೆಯಿಂದ ಸುವೇಂದು ಅವರನ್ನ ಉಳಿಸಿಕೊಳ್ಳುವ ಯಾವ ಪ್ರಯತ್ನಗಳೂ ನಡೆಯುವಂತೆ ಕಾಣುತ್ತಿಲ್ಲ. ಅವರು ಹೋದರೆ ಹೋಗಲಿ, ನಾವು ಇರಿ ಎಂದು ಹೇಳಬಾರದೆಂದು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ.
ಇದರ ಬೆನ್ನಲ್ಲೇ ಪಶ್ಚಿಮ ಬಂಗಾಳ ದಕ್ಷಿಣ ಭಾಗದ ಸ್ಟೇಟ್ ಟ್ರಾನ್ಸ್ ಪೋರ್ಟ್ ಕಾರ್ಪೋರೇಷನ್ ಮುಖ್ಯಸ್ಥ ದಿಪ್ತಾಂಗ್ಯೂ ಚೌಧರಿ ರಾಜೀನಾಮೆ ನೀಡಿದ್ದಾರೆ. ಅಮಿತ್ ಶಾ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದಾಗ ಸುವೆಂದು ಅಧಿಕಾರಿ ಸೇರಿದಂತೆ ಹಲವು ಸಚಿವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.