ಚಾಮರಾಜನಗರ: ಮರಾಠಿ ಅಭಿವೃದ್ಧಿ ಪ್ರಾಧಿಜಾರದ ವಿಚಾರವಾಗಿ ಯತ್ನಾಳ್ ಕನ್ನಡ ಪರ ಸಂಘಟನೆ ವಿರುದ್ಧ ಮಾತನಾಡಿದ್ದರು. ಹೀಗಾಗಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು ಯತ್ನಾಳ್ ವಿರುದ್ಧ ನಗರದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಟೊಮ್ಯಾಟೊ ಚಳವಳಿ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರ ದೇಗುಲ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತ ತಲುಪಿ ಅಲ್ಲಿ ಯತ್ನಾಳ್ ಭಾವಚಿತ್ರಕ್ಕೆ ಟೊಮ್ಯಾಟೊಗಳನ್ನು ಹೊಡೆದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಕನ್ನಡಪರ ಹೋರಾಟಗಾರ ಚಾ. ರಂ. ಶ್ರೀನಿವಾಸಗೌಡ ಮಾತನಾಡಿ, ಯತ್ನಾಳ್ ಒಬ್ಬ ಬಕೆಟ್ ರಾಜಕಾರಣಿ, ಕನ್ನಡಪರ ಹೋರಾಟಗಾರ ಬಗ್ಗೆ ಅರಿಯದೇ ಕೇವಲವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಅವರು ಬೆಷರತ್ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೇ ಅವರನ್ನು ಹುಚ್ಚಾಸ್ಪತ್ರೆಗೆ ದಾಖಲಿಸಬೇಕು ಎಂದು ಆಕ್ರೋಶ ಹೊರಹಾಕಿದರು.