Wednesday, October 27, 2021
No menu items!
Home Bharata ಕೆಕೆಆರ್ ತಂಡವನ್ನ ಗಂಟು ಮೂಟೆ ಕಟ್ಟಿಸ್ತಾರ ಧೋನಿ..?

ಕೆಕೆಆರ್ ತಂಡವನ್ನ ಗಂಟು ಮೂಟೆ ಕಟ್ಟಿಸ್ತಾರ ಧೋನಿ..?

ದುಬೈ ;ಗೆಲ್ಲಲೇ ಬೇಕಾದ ಒತ್ತಡದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಅಧಿಕೃತ ವಾಗಿ ಐಪಿಎಲ್ ರೇಸ್ ನಿಂದ ಹೊರಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ.

ಆಡಿರುವ 12 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯ ಸೋತಿರುವ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಇದೀಗಾಗಲೇ ಗಂಟು ಮೂಟೆ ಕಟ್ಟಿದೆ. ಇದೀಗ ಚೆನ್ನೈ ತಂಡಕ್ಕೆ ಇಂದಿನ ಪಂದ್ಯ ಕೇವಲ ಔಪಚಾರಿಕ ಪಂದ್ಯವಾಗಿದೆ. ಆದರೆ ಕೋಲ್ಕತ್ತಾ ತಂಡಕ್ಕೀಗ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ. ಗೆದ್ದರಷ್ಟೇ ಮಾರ್ಗನ್ ನೇತೃತ್ವದ ಕೆಕೆಆರ್ ತಂಡ ಫ್ಲೇ ಆಫ್ ಹಂತ ಪ್ರವೇಶಿಸಲಿದೆ.

ಇತ್ತ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಿರುವ 12 ಪಂದ್ಯಗಳಲ್ಲಿ 6ರಲ್ಲಿ ಸೋತು ಉಳಿದ ಉಳಿದ 6 ಪಂದ್ಯ ಗೆದ್ದಿದೆ. ಆದರೆ ಪ್ಲೇ ಆಫ್ ಹಂತಕ್ಕೇರಬೇಕಾದರೆ ಇನ್ನೊಂದು ಗೆಲುವು ಅನಿವಾರ್ಯ .ಇಂದಿನ ಪಂದ್ಯ ಸೋತರೆ ಮನೆ ಕಡೆ ಮುಖ ಮಾಡಬೇಕಾದ ಇಕ್ಕಟ್ಟಿನಲ್ಲಿ ಕೆಕೆಆರ್ ತಂಡ ಸಿಲುಕಿದೆ. ಆದ್ದರಿಂದ ಕೋಲ್ಕತ್ತಾ ಪಾಳಯಕ್ಕೆ ಇಂದಿನ ಪಂದ್ಯ ನಿರ್ಣಾಯಕವಾಗಿದ್ದು, ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಿಸುತ್ತಿದೆ.

ಇನ್ನು ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಹಿಂದೆದೂ ತೋರದ ಹೀನಾಯ ಪ್ರದರ್ಶನ ತೋರುತ್ತಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ತಂಡಕ್ಕೆ ಅವಮಾನ ತಪ್ಪಿಸುವ ಉದ್ದೇಶದಿಂದಾದರೂ ಇಂದಿನ ಪಂದ್ಯ ಗೆಲ್ಲುವ ತವಕದಲ್ಲಿದೆ. ಚೆನ್ನೈ ತಂಡಕ್ಕೆ ಇಂದಿನ ಪಂದ್ಯ ಔಪಚಾರಿಕ ಪಂದ್ಯವಾಗಿರುವುದರಿಂದ ಹಲವು ಬದಲಾವಣೆ ನಿರೀಕ್ಷಿಸಲಾಗಿದೆ.ಆದರೆ ಕೋಲ್ಕತ್ತಾ ತಂಡದಲ್ಲಿ ಕಳೆದ ಬಾರಿಯ ತಂಡವೇ ಆಕ್ರಮಣಕ್ಕೆ ಇಳಿಯಲು ಸನ್ನದ್ಧವಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments