ಬೆಂಗಳೂರು : ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆಗೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮಗ ಕಾರ್ತಿ ಚಿದಂಬರಂ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ್ದಾರೆ. ಈ ಬಗ್ಗೆ ಡಿ ಕೆ ಶಿವಕುಮಾರ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ. ಈ ಬೆನ್ನಲ್ಲೇ ಕಾರ್ತೀ ಚಿದಂಬರಂ ಶೀವಕುಮಾರ್ ಮನೆಗೆ ಭೇಟಿ ನೀಡಿದ್ದಾರೆ. ತಂದೆ ಚಿದಂಬರಂ ಅವರ ಸಲಹೆಯಂತೆ ಕಾರ್ತೀ ಚಿದಂಬರಂ ಭೇಟಿ ನೀಡಿದ್ದಾರೆ ಎಂದು ತಿಳೀದು ಬಂದಿದೆ. ಡಿ ಕೆ ಶಿವಕುಮಾರ್ ಅವರ ಜೊತೆ ಕೆಲಕಾಲ ಮಾತುಕತೆ ನಡೆಸಿದ್ದಾರೆ. ನಂತರ ಅವರಿಗೆ ಧೈರ್ಯ ತುಂಬಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಸಂಸದ ಡಿ ಕೆ ಸುರೇಶ್ ಅವರು ಸಹ ಉಪಸ್ಥಿತರಿದ್ದರು ಎಂಬುದು ತಿಳೀದು ಬಂದಿದೆ.
2017ರಲ್ಲಿ ಚಿದಂಬರಂ ಹಾಗೂ ಪುತ್ರ ಕಾರ್ತಿ ಚಿದಂಬರಂ ಮನೆ ಮೇಲೂ ಸಿಬಿಐ ದಾಳಿ ನಡೆಸಿತ್ತು.