Tuesday, October 26, 2021
No menu items!
Home Latest ಉದ್ವಿಗ್ನ ಗಡಿ ಭಾಗ ಭೂತಾನ್ ನಲ್ಲಿ ಜಾಗ ಆಕ್ರಮಿಸಿ ಗ್ರಾಮವನ್ನೇ ನಿರ್ಮಿಸಿದ ಚೀನಾ..!

ಉದ್ವಿಗ್ನ ಗಡಿ ಭಾಗ ಭೂತಾನ್ ನಲ್ಲಿ ಜಾಗ ಆಕ್ರಮಿಸಿ ಗ್ರಾಮವನ್ನೇ ನಿರ್ಮಿಸಿದ ಚೀನಾ..!

ನವದೆಹಲಿ: ಭಾರೀ ವಿವಾದಾತ್ಮಕ ಪ್ರದೇಶವಾದ ಭಾರತ ಮತ್ತು ಚೀನಾ ದ ಗಡಿ ಭಾಗದ ಡೋಕ್ಲಾಮ್ ಸಮೀಪದ ಭೂತಾನ್ ಪ್ರದೇಶದ ಒಳಗಡೆ ಚೀನಾ ಒಂದು ಹಳ್ಳಿಯನ್ನೇ ನಿರ್ಮಿಸಿದೆ ಎಂದು ತಿಳಿದು ಬಂದಿದೆ.ಈ ಕುರಿತು ಹಿರಿಯ ಪತ್ರಕರ್ತರೊಬ್ಬರು ವಿಷಯ ಬಹಿರಂಗಪಡಿಸಿದ್ದು ಸರಣಿ ಟ್ವೀಟ್ ಗಳ ಮೂಲಕ ಜಾಗದ ಮಾಹಿತಿ ನೀಡಿದ್ದಾರೆ.

2017ರಲ್ಲಿ ಭಾರತ ಮತ್ತು ಚೀನಾ ನಡುವೆ 73 ದಿನಗಳ ಸಂಘರ್ಷದ ಮೂಲದ ಯುದ್ಧ ಭೀತಿ ಹುಟ್ಟುಹಾಕಿದ್ದ ಡೋಕ್ಲಾಂ ಪ್ರದೇಶದಿಂದ ಕೇವಲ 9 ಕಿ.ಮೀ ದೂರದಲ್ಲಿ ಈ ಹಳ್ಳಿಯನ್ನು ಸ್ಥಾಪಿಸಲಾಗಿದೆ.ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 2.5 ಕಿ.ಮೀ ಒಳಹೋಗಿ ಗ್ರಾಮವನ್ನು ಚೀನಾ ಸ್ಥಾಪಿಸಿದೆ. ಇದು ಭಾರತಕ್ಕೆ ಆತಂಕಕಾರಿ ವಿಷಯವಾಗಿದೆ ಎಂದು ಪತ್ರಕರ್ತ ಶೇನ್ ಶಿವೇ ಅಭಿಪ್ರಾಯಪಟ್ಟಿದ್ದಾರೆ.

ಇಂಥದ್ದೊಂದು ಹಳ್ಳಿ ನಿರ್ಮಾಣಗೊಂಡಿರುವ ವಿಷಯವನ್ನು ಚೀನಾ ಸರ್ಕಾರದ ಮುಖವಾಣಿ ಪತ್ರಿಕೆ ಸಿಜಿಟಿಎನ್‌ ನ್ಯೂಸ್‌ನ ವರದಿಗಾರ ಶೆನ್‌ ಶುವೇ, ಗುರುವಾರ ಬೆಳಗ್ಗೆ ಫೋಟೋ ಸಮೇತ ಟ್ವೀಟ್‌ ಮಾಡಿದ್ದಾರೆ. ಅಲ್ಲದೆ ಈ ಹಳ್ಳಿ ಎಲ್ಲಿ ನಿರ್ಮಾಣಗೊಂಡಿದೆ ಎಂಬ ವಿಷಯವನ್ನೂ ನಕ್ಷೆ ಸಮೇತ ದಾಖಲಿಸಿದ್ದರು. ಆದರೆ ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಈಗಲೂ ಡೋಕ್ಲಾಮ್, ಲಡಾಖ್ ಗಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂತಹ ಸಮಯದಲ್ಲಿ ಚೀನಾ ಭೂತಾನ್ ಭೂಪ್ರದೇಶದಲ್ಲಿ ಹೊಸ ಹಳ್ಳಿ ರಚಿಸಿರುವುದು ಮುಂದಿನ ದಿನಗಳಲ್ಲಿ ಭಾರತಕ್ಕೆ ಆತಂಕಕಾರಿ ಬೆಳವಣಿಗೆಯಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments