Friday, May 14, 2021
No menu items!
Home Karavali ಕಡಲ 'ಕಿನಾರೆ'ಯ ಲೋಕಲ್ ದಂಗಲ್ ; ಲೋಕಲ್ ಫೈಟ್ ಅಖಾಡಕ್ಕೆ ಕರಾವಳಿ ಸಜ್ಜು

ಕಡಲ ‘ಕಿನಾರೆ’ಯ ಲೋಕಲ್ ದಂಗಲ್ ; ಲೋಕಲ್ ಫೈಟ್ ಅಖಾಡಕ್ಕೆ ಕರಾವಳಿ ಸಜ್ಜು

ಮಂಗಳೂರು : ಕೊರೋನಾ ಭೀತಿಯಿಂದ ಸ್ತಬ್ಧವಾಗಿದ್ದ ಕರಾವಳಿಯ ರಾಜಕೀಯ ಗರಿಗೆದರಿದೆ. ಇದೀಗ ಗ್ರಾಮ ಪಂಚಾಯತಿ ಚುನಾವಣೆ ಘೋಷಣೆಯಾಗಿದ್ದು ಪಂಚಾಯತಿ ಸಮರಕ್ಕೆ ರಾಜಕೀಯ ಪಕ್ಷಗಳು ಸಜ್ಜಾಗಬೇಕಿದೆ. ದ.ಕ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಡಿ.22ರಂದು 109 ಹಾಗೂ ಎರಡನೇ ಹಂತದಲ್ಲಿ ಡಿ.27ರಂದು 114 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಿಗದಿಯಾಗಿದೆ.

ಲೋಕಲ್ ದಂಗಲ್ ನಲ್ಲಿ ಪಕ್ಷದ ಚಿಹ್ನೆ ಇಲ್ಲದಿದ್ದರೂ ರಾಜಕೀಯ ಪಕ್ಷಗಳಿಗೆ ಗ್ರಾಪಂ ಚುನಾವಣೆ ಜಿದ್ದಾಜಿದ್ದಿನ ಕಣ. ಕಳೆದ 2015ರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ದ.ಕ ಜಿಲ್ಲೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಮೊಳಗಿಸಿತ್ತು. ಜಿಲ್ಲೆಯ 227 ಪಂಚಾಯಿತಿಗಳ ಪೈಕಿ 129 ಪಂಚಾಯಿತಿಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 80 ಪಂಚಾಯಿತಿಯಲ್ಲಿ ಅಧಿಕಾರ ಪಡೆದಿತ್ತು.

ಇನ್ನು ಈ ಬಾರಿ ದ.ಕ. ಜಿಲ್ಲೆಯ 228 ಗ್ರಾಪಂಗಳ ಪೈಕಿ ವೇಣೂರು, ಪುದು ಮತ್ತು ಅರಂಬೋಡಿ ಪಂಚಾಯಿತಿಗಳ ಅವಧಿ ಇನ್ನೂ ಪೂರ್ಣಗೊಂಡಿಲ್ಲ. ಬಜ್ಪೆ ಮತ್ತು ಮರವೂರು ಗ್ರಾಪಂಗಳು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿವೆ. ಹಾಗಾಗಿ 223 ಗ್ರಾಪಂಗಳಿಗೆ ಮಾತ್ರ ಚುನಾವಣೆ ನಿಗದಿಯಾಗಿದೆ.

ಇನ್ನುಳಿದಂತೆ ಪಂಚಾಯತ್ ಮತದಾನದ ವೇಳೆ ಕೋವಿಡ್ 19 ನಿಯಮಗಳನ್ನು ಕಡ್ಡಾಯವಾಗಿದೆ ಪಾಲಿಸಬೇಕಿದೆ. ಮತದಾರರರು ಮತಗಟ್ಟೆ ಪ್ರವೇಶಿಸುವ ವೇಳೆ ಕಡ್ಡಾಯ ಮಾಸ್ಕ್ ಧರಿಸಿರಬೇಕು.ಮತದಾನದ ವೇಳೆಯಲ್ಲಿ ಸಾಮಾಜಿಕ ಅಂತರ ಪಾಲಿಸಬೇಕು. ಮತಗಟ್ಟೆ ಪ್ರವೇಶಿಸುವ ಮೊದಲು ಕೈಗಳನ್ನು ಸ್ಯಾನಿಟೈಸ್‌ಗೊಳಿಸಬೇಕು ಎಂದು ಚುನಾವಣಾ ಆಯೋಗ ಸುತ್ತೋಲೆ ಹೊರಡಿಸಿದೆ. ಇನ್ನು ಕೊರೋನಾ ಸೋಂಕಿತರಿಗೂ ಮತದಾನದ ಅವಕಾಶ ನೀಡಲಾಗಿದ್ದು ಮತದಾನದ ಕೊನೆಯ ಒಂದು ಗಂಟೆಯನ್ನು ಕೊರೋನಾ ಸೋಂಕಿತರಿಗಾಗಿ ಮೀಸಲಿಡಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments