Monday, December 6, 2021
No menu items!
Home Karnataka ಪೊಲೀಸ್ ಅಧಿಕಾರಿಗೆ ಬೆದರಿಕೆ ಆರೋಪ : ಡಿ ಕೆ ಸುರೇಶ್ ವಿರುದ್ಧ ಚುನಾವಣಾಧಿಕಾರಿಗೆ ದೂರು..!

ಪೊಲೀಸ್ ಅಧಿಕಾರಿಗೆ ಬೆದರಿಕೆ ಆರೋಪ : ಡಿ ಕೆ ಸುರೇಶ್ ವಿರುದ್ಧ ಚುನಾವಣಾಧಿಕಾರಿಗೆ ದೂರು..!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ.ಸುರೇಶ್, ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿ, ದಬ್ಬಾಳಿಕ ನಡೆಸಿ, ಕ್ಷೇತ್ರದಲ್ಲಿ ಭಯದ ವಾತಾವಣ ಸೃಷ್ಠಿಸುತ್ತಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ದೂರು ನೀಡಿದೆ.

ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾದ ಡಿ ಕೆ ಸುರೇಶ್ ರವರು ಎ ಸಿ ಪಿ ವೆಂಕಟೇಶ್ ನಾಯ್ಡು ಅವರನ್ನು ಕುರಿತು ನಾನು ನನ್ನ ದಾರಿ ನಾನು ನೋಡ್ತೀನಿ, ಪೊಲೀಸ್ ಠಾಣೆಯಲ್ಲಿ ನನ್ನ ರೀತಿಯ ರಾಜಕೀಯ ಮಾಡಿ ತೋರಿಸುತ್ತೇನೆ … ‘ ಎಂದಿದ್ದಾರೆ.

‘ಏನು ಮಹಾ ಆಗಿಲ್ಲ ಅಂದ್ರು ಹೇಳಿ ಮಹಾ ಮಾಡಿ ತೋರಿಸ್ತೀನಿ ‘ಎಂದು ಗಲಭೆ ಸೃಷ್ಟಿಸುವ ಅರ್ಥದಲ್ಲಿ ಬೆದರಿಕೆ ಒಡ್ಡಿದ್ದಾರೆ. ಎಸಿಪಿ ವೆಂಕಟೇಶ ನಾಯ್ಡು ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿರುತ್ತಾರೆ. ಸಂಸದರು ಇಂತಹ ಬೆದರಿಕೆಯ ಮೂಲಕ ಭಯದ ವಾತಾವರಣ ಸೃಷ್ಟಿಸಿ ಚುನಾವಣೆಯಲ್ಲಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಲು ತೊಂದರೆ ಉಂಟುಮಾಡಿರುತ್ತಾರೆ. ಈ ಮೂಲಕ ಕ್ಷೇತ್ರದ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ. ಆದ ಕಾರಣ ತಾವು ಸಂಸದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಮುಕ್ತ ಮತ್ತು ನಿರ್ಭೀತಿಯಿಂದ ಚುನಾವಣೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ನೀಡಿರುವ ದೂರಿನಲ್ಲಿ ತಿಳಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments