Thursday, September 16, 2021
No menu items!
Home Bharata ಕಂಡಕ್ಟರ್ ಸಾವಿಗೆ ಉದ್ಧವ್ ಠಾಕ್ರೆ ಕಾರಣ: ಏನಿದು ಘಟನೆ

ಕಂಡಕ್ಟರ್ ಸಾವಿಗೆ ಉದ್ಧವ್ ಠಾಕ್ರೆ ಕಾರಣ: ಏನಿದು ಘಟನೆ

ಮುಂಬೈ: ಕಳೆದ ಮೂರು ತಿಂಗಳಿಂದ ಸಂಬಳ ನೀಡಿಲ್ಲ ಎಂದು ಬಸ್​ ಕಂಡಕ್ಟರ್​ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಭಾರೀ ಮುಜುಗುರ ಉಂಟು ಮಾಡಿದೆ.

ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಆಗಿದ್ದ ಜಲಗಾವ್​ ನಿವಾಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಸಾವಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ ಕಾರಣ ಎಂದು ಮೃತ ಕಂಡಕ್ಟರ್ ಹೇಳಿರುವುದಾಗಿ ಅವರ ಸಹೋದರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಕಂಡಕ್ಟರ್​ ಅನಿಲ್ ಚೌಧರಿ ತಮ್ಮ ಪುತ್ರನ ಸಾವಿಗೆ ಮಹಾರಾಷ್ಟ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದ ಜಲಗಾಂವ್​ ಡಿಪೋದಲ್ಲಿ ಕಂಡಕ್ಟರ್​ ಆಗಿದ್ದ ಮೃತರು ಸಾಲ ಮಾಡಿಕೊಂಡಿದ್ದರು. ಬರುವ ಸಂಬಳವೇ ಕಡಿಮೆ. ಆದರಲ್ಲಿಯೂ ಇದೀಗ ಅವರಿಗೆ ಸರಿಯಾದ ಸಂಬಳ ಸಿಕ್ಕಿರಲಿಲ್ಲ. ಸಾಲಗಾರರ ಕಾಟ ಹೆಚ್ಚಾಗಿತ್ತು. ಇದರಿಂದಾಗಿ ಜೀವನ ನಡೆಸುವುದು ಸಾಧ್ಯವಾಗದೇ ಬೇಸತ್ತು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ.

ಇನ್ನು ಪ್ರಕರಣ ಸುದ್ದಿ ಆಗುತ್ತಿದ್ದಂತೆಯೇ, ಮಹಾರಾಷ್ಟ್ರ ರಾಜ್ಯ ಸಾರಿಗೆ ಸಚಿವರು ಸಂಬಳ ಬಾಕಿ ಇರುವ ನೌಕರರಿಗೆ ಇಂದು ಒಂದು ತಿಂಗಳ ಸಂಬಳ ನೀಡಲಾಗುವುದು ಎಂದಿದ್ದಾರೆ. ದೀಪಾವಳಿಗೂ ಮುನ್ನ ಎರಡು ತಿಂಗಳ ಸಂಬಳವನ್ನು ಸಾರಿಗೆ ನೌಕರರು ಪಡೆಯಲಿದ್ದಾರೆ. ಅವರು ನಿರಾಶರಾಗಬೇಕಾಗಿಲ್ಲ, ಆತ್ಮಹತ್ಯೆಯಂತಹ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಆರ್ಥಿಕ ಸ್ಥಿತಿ ಈಗ ಕೆಟ್ಟದಾಗಿದೆ ಆದರೆ, ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments