Tuesday, October 26, 2021
No menu items!
Home Bharata ಕಾಂಗ್ರೆಸ್ ಪ್ರಭಾವಿ ನಾಯಕ ಅಹ್ಮದ್ ಪಟೇಲ್ ನಿಧನ: ಪ್ರಧಾನಿ ಸೇರಿ ಗಣ್ಯರ ಸಂತಾಪ

ಕಾಂಗ್ರೆಸ್ ಪ್ರಭಾವಿ ನಾಯಕ ಅಹ್ಮದ್ ಪಟೇಲ್ ನಿಧನ: ಪ್ರಧಾನಿ ಸೇರಿ ಗಣ್ಯರ ಸಂತಾಪ

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ (71) ವಿಧಿವಶರಾಗಿದ್ದಾರೆ. ಮುಂಜಾನೆ 3.30ರ ಸುಮಾರಿಗೆ ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಹಮದ್ ಪಟೇಲ್ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗಿತ್ತು. ಇದಲ್ಲದೆ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

ಕೊರೊನಾ ಪಾಸಿಟಿವ್ ಬಂದಾಗ ಅವರನ್ನು ಮೊದಲಿಗೆ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗುರುಗ್ರಾಮದ ಮೆದಾಂತಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ವಾರದ ಹಿಂದೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿತ್ತು. ತಿಂಗಳಿಂದ ಸಾವು ಬದುಕಿನ ನಡುವೆ ಸೆಣಸಾಡಿದ ಅಹಮದ್ ಪಟೇಲ್ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಈ ಬಗ್ಗೆ ಅಹ್ಮದ್ ಪಟೇಲ್ ಪುತ್ರ ಫೈಸಲ್ ಟ್ವೀಟ್ ಮಾಡವ ಮೂಲಕ ಸ್ಪಷ್ಟಪಡಿಸಿದ್ದಾರೆ.

ಅಹಮದ್ ಪಟೇಲ್ ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಹ್ಮದ್ ಪಟೇಲ್ ಒಬ್ಬ ಕುಶಾಗ್ರಮತಿ ರಾಜಕಾರಣಿಯಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಪ್ರಬಲಗೊಳಿಸುವ ಕೆಲಸ ಮಾಡಿದ್ದರು ಎಂದು ಸ್ಮರಿಸಿದ್ದಾರೆ.

ಅಹ್ಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಅವರ ಅಗಲಿಕೆ ಸುದ್ದಿ ಆಘಾತ ತಂದಿದೆ. ಅಹ್ಮದ್ ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ.

ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದವರು ಅಹ್ಮದ್ ಪಟೇಲ್ ಅವರು. ಪಕ್ಷಕ್ಕೆ ಆಧಾರ ಸ್ತಂಭದಂತಿದ್ದ ಹಿರಿಯ ನಾಯಕನ ಅಗಲಿಕೆ ಪಕ್ಷಕ್ಕೆ ಭರಿಸಲಾರದ ನಷ್ಟವಾಗಿದೆ ಎಂದು ಅವರು ದುಃಖಿಸಿದ್ದಾರೆ. ಅಹ್ಮದ್ ಪಟೇಲ್ ಅವರ ಜತೆ ಮೊದಲಿಂದಲೂ ಉತ್ತಮ ಒಡನಾಟ ಹೊಂದಿದ್ದೆ. ಅವರು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಮಾರ್ಗದರ್ಶಕರಾಗಿದ್ದರು. ಅವರ ಆಲೋಚನೆ, ವಿಚಾರ, ಸಿದ್ಧಾಂತಗಳು ನಮ್ಮೆಲ್ಲರಿಗೂ ಮಾದರಿಯಾಗಿತ್ತು ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

1949ರ ಆ. 21ರಂದು ಗುಜರಾತ್ನಲ್ಲಿ ಜನಿಸಿದ್ದ ಅಹ್ಮದ್ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಅಹಮದ್ ಪಟೇಲ್ ಒಟ್ಟು 8 ಬಾರಿ ಸಂಸದರಾಗಿದ್ದರು. ಎಐಸಿಸಿಯ ಖಜಾಂಚಿಯೂ ಆಗಿದ್ದ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರಲ್ಲೇ ಅತ್ಯಂತ ಹೆಚ್ಚು ಪ್ರಭಾವಿ ಎನಿಸಿದ್ದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಹಳ ವರ್ಷ ರಾಜಕೀಯ ಕಾರ್ಯದರ್ಶಿಯೂ ಆಗಿದ್ದರು. ಇದಲ್ಲದೆ ಇತರೆ ಪಕ್ಷಗಳ ಪ್ರಮುಖ ನಾಯಕರೊಂದಿಗೂ ಅತ್ಯಂತ ನಿಕಟ ಸಂಬಂಧ ಹೊಂದಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments