Friday, May 14, 2021
No menu items!
Home Karnataka ವಿದ್ಯುತ್, ನೀರು, ಆಸ್ತಿ ತೆರಿಗೆ ಹೆಚ್ಚಳ: ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ವಿದ್ಯುತ್, ನೀರು, ಆಸ್ತಿ ತೆರಿಗೆ ಹೆಚ್ಚಳ: ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ನೀರಿನ, ಆಸ್ತಿ ತೆರಿಗೆ ಇತ್ಯಾದಿಗಳ ದರ ಹೆಚ್ಚಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಪ್ರತಿಭಟನೆಯಲ್ಲಿ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ವಿ.ಎಸ್. ಉಗ್ರಪ್ಪ ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಮೊದಲಾದವರು ಭಾಗವಹಿಸಿದ್ದರು. ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರವನ್ನೂ ಕಾಂಗ್ರೆಸ್ ನಾಯಕರು ಈ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡರು.

ಈ ವೇಳೆ ಮಾತನಾಡಿದ ರಾಜ್ಯಸಭಾ ಸಂಸದ ಬಿ.ಕೆ. ಹರಿಪ್ರಸಾದ್, ರೈತರ ವಿರುದ್ಧ ಸರ್ಕಾರ ದಮನಕಾರಿ ನೀತಿ ಅನುಸರಿಸುತ್ತಿದೆ. ರೈತರನ್ನು ಬೀದಿಪಾಲು ಮಾಡುವ ಭೂಸುಧಾರಣಾ ಕಾಯ್ದೆಯನ್ನು ನಾವು ವಿಧಾನಪರಿಷತ್ನಲ್ಲಿ ಕೆಡವಿದೆವು. ಹೀಗಾಗಿ, ಮೇಲ್ಮನೆ ಸಭಾಪತಿಯನ್ನೇ ಕೆಳಗಿಳಿಸಲು ಅವಿಶ್ವಾಸ ನಿರ್ಣಯ ತರುತ್ತಿದ್ದಾರೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ತಂದಿರುವ ಈ ನೋ ಕಾನ್ಫಿಡೆನ್ಸ್ ಮೋಷನ್ ಅನ್ನು ಜೆಡಿಎಸ್ನವರು ವಿರೋಧಿಸಬೇಕು. ಇಲ್ಲವಾದರೆ ಜಾತ್ಯತೀತ ಜನತಾ ದಳ ಕೂಡ ರೈತ ವಿರೋಧಿ ಎಂಬ ಹಣೆಪಟ್ಟಿ ಹೊತ್ತುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಹರಿಹಾಯ್ದ ಬಿ.ಕೆ. ಹರಿಪ್ರಸಾದ್, ವಿದ್ಯುತ್ ಸೇರಿ ಹಲವು ದರ ಏರಿಕೆ ಆಗಿದೆ. ಪೆಟ್ರೋಲ್ ದರ ಏರಿಕೆ ಆಗುತ್ತಲೇ ಇದೆ. ಪ್ರಧಾನಿ ತಿಂಗಳಿಗೊಮ್ಮೆ ಮನ್ ಕೀ ಬಾತ್ ಮಾಡುತ್ತಾರೆ. ಎಲ್ಲೂ ಅವರು ಈ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿಲ್ಲ. ಈರುಳ್ಳಿ ಬೆಲೆ ಹೆಚ್ಚಾಗಿದೆ, ಗೋದಿ ಬೆಲೆ ಹೆಚ್ಚಾಗಿದೆ. ನಾನು ಮಶ್ರೂಮ್ ತಿನ್ನುತ್ತೇನೆ ಅಂತ ಮೋದಿ ಹೇಳ್ತಾರೆ. ಗೋದಿ ಬೆಲೆ ಏರಿಕೆಗೂ ಅಣಬೆಗೂ ಏನು ಸಂಬಂಧ ಎಂದು ಪ್ರಶ್ನಿಸಿ ವ್ಯಂಗ್ಯ ಮಾಡಿದರು.

ಇನ್ನು ಇದೆ ವೇಳೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಿಎಂ ರಾಜಕೀಯ ಕಾರ್ದರ್ಶಿ ಅತ್ಮಹತ್ಯೆಗೆ ಯತ್ನಿಸಿರುವ ಪ್ರಕರಣದಲ್ಲಿ ಎಸ್ ಐ ಟಿ ತನಿಖೆಗೆ ವಹಿಸಬೇಕು. ಇತ್ತೀಚೆಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ರಾಜೀನಾಮೆ ಬೆನ್ನಲ್ಲೇ ಈಗ ಇವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೀಗಾಗಿ ಈ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಕಾಂಗ್ರೆಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಅವರ ಆಪ್ತವಲಯದ ಎಲ್ಲವೂ ಸರಿಯಿಲ್ಲದಂತಹ, ನಿಗೂಢವೆನಿಸುವಂತಹ ಬೆಳವಣಿಗೆಗಳು ನಡೆಯುತ್ತಿವೆ, ರಾಜಕೀಯ ಕಾರ್ಯದರ್ಶಿ, ರಾಜಕೀಯ ಸಲಹೆಗಾರ, ಮಾಧ್ಯಮ ಸಲಹೆಗಾರ, ಹೀಗೆ ಮುಖ್ಯಮಂತ್ರಿ ಸುತ್ತಲಿನ ಅಸಹಜ ಬೆಳವಣಿಗೆಗಳು ಅನುಮಾನಾಸ್ಪದವಾಗಿದೆ, ರಾಜ್ಯದ ಆಡಳಿತದ ಮೇಲೆ ಪರಿಣಾಮ ಬೀರುವಂತಿದೆ ಎಂದು ಟ್ವೀಟ್‌ ಮಾಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments