ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1, 446 ಜನರಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು 18,683 ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ಹಾಗೂ 90,002 ಆರ್ಟಿಪಿಸಿಆರ್ ಟೆಸ್ಟ್ಗಳೂ ಸೇರಿದಂತೆ ಒಟ್ಟು 1,08,685 ಕೊರೊನಾ ಟೆಸ್ಟ್ಗಳನ್ನು ಮಾಡಲಾಗಿದೆ. ಅದರಲ್ಲಿ 1,446 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೆ ರಾಜ್ಯದಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ 8,89,113 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 758 ಕೇಸ್ ಗಳು ದಾಖಲಾಗಿದ್ದು, ಉಳಿದಂತೆ ಬಾಗಲಕೋಟೆ 07, ಬಳ್ಳಾರಿ 22, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 32, ಬೀದರ್ 12, ಚಾಮರಾಜನಗರ 13, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 11, ಚಿತ್ರದುರ್ಗ 40, ದಕ್ಷಿಣ ಕನ್ನಡ 35, ದಾವಣಗೆರೆ 23, ಧಾರವಾಡ 16, ಗದಗ 10, ಹಾಸನ 34, ಹಾವೇರಿ 04, ಕಲಬುರಗಿ 26, ಕೊಡಗು 07, ಕೋಲಾರ 32, ಕೊಪ್ಪಳ 00, ಮಂಡ್ಯ 75, ಮೈಸೂರು 53, ರಾಯಚೂರು 27, ರಾಮನಗರ 02, ಶಿವಮೊಗ್ಗ 20, ತುಮಕೂರು 68, ಉಡುಪಿ 26, ಉತ್ತರ ಕನ್ನಡ 20, ವಿಜಯಪುರ 12, ಯಾದಗಿರಿ 07, ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲೇ 13 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11821ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಕೊರೊನಾವೈರಸ್ ಒಟ್ಟು 889113 ಸೋಂಕಿತ ಪ್ರಕರಣಗಳ ಪೈಕಿ 852584 ಸೋಂಕಿತರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲೇ 894 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 24689 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.