Saturday, May 15, 2021
No menu items!
Home Bharata ಜನವರಿ ಅಂತ್ಯದವರೆಗೆ ಲಾಕ್ ಡೌನ್ ಮುಂದುವರೆಸಿದ ಮಹಾರಾಷ್ಟ್ರ ಸರ್ಕಾರ

ಜನವರಿ ಅಂತ್ಯದವರೆಗೆ ಲಾಕ್ ಡೌನ್ ಮುಂದುವರೆಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ರೂಪಾಂತರಿ ವೈರಸ್ ಹೊಸ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಮಹಾರಾಷ್ಟ್ರದಲ್ಲಿ ಜನವರಿ 31 ರವರೆಗೆ ಲಾಕ್ ಡೌನ್ ಮಾಡಲಾಗಿದೆ.

ದೇಶದಲ್ಲಿ ಈಗ ಕಾಣಿಸಿಕೊಂಡಿರುವ ಬ್ರಿಟನ್ ವೈರಸ್ ಶೇ.70 ರಷ್ಟು ವೇಗದಲ್ಲಿ ಹರಡುತ್ತದೆ ಎನ್ನಲಾಗಿದ್ದು, ಹೀಗಾಗಿಯೇ ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ಇಂತದೊಂದು ನಿರ್ಧಾರ ಕೈಗೊಂಡಿದೆ. ಭಾರತ ಸರ್ಕಾರ ಈ ಮೊದಲೇ ಬ್ರಿಟನ್ ನಿಂದ ಆಗಮಿಸುವ ಅಥವಾ ತೆರಳುವ ವಿಮಾನಗಳ ಮೇಲೆ ನಿಷೇಧ ಹೇರಿದೆ.

ದೇಶದಲ್ಲಿ 20ಕ್ಕೂ ಹೆಚ್ಚು ಮಂದಿಯಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಸೃಷ್ಟಿಯಾಗದಂತೆ ನೋಡಿಕೊಳ್ಳಲು ಲಾಕ್ಡೌನ್ ನಿಯಮವನ್ನು ವಿಸ್ತರಣೆ ಮಾಡಿದ್ದಾರೆ.

ವೈರಸ್ ಹರಡುವುದನ್ನು ತಡೆಯಲು ಕೆಲವು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಂಕ್ರಾಮಿಕ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಲಾಕ್ಡೌನ್ ಅನ್ನು ಜನವರಿ 31 ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.

ಕಳೆದ ತಿಂಗಳುಗಳಿಂದ ಮಹಾರಾಷ್ಟ್ರ ಸರ್ಕಾರ ಕೆಲವು ವಲಯಗಳ ಮೇಲಿನ ನಿರ್ಬಂಧಗಳನ್ನು ಸಡಿಲಗೊಳಿಸಿತ್ತು. ಧಾರ್ಮಿಕ ಸ್ಥಳಗಳಿಗೆ ಜನರು ತೆರಳು ಕೆಲ ತಿಂಗಳ ಹಿಂದಷ್ಟೇ ಅನುಮತಿ ನತೀಡಿತ್ತು. 9-12ನೇ ತರಗತಿ ಮಕ್ಕಳು ಶಾಲೆ-ಕಾಲೇಜುಗಳಿಗೆ ತೆರಳಲು ಅವಕಾಶ ನೀಡಿತ್ತು.

ಹೊಸ ವರ್ಷ ಆಚರಣೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಕೊರೊನಾ ಸೋಂಕು ಮತ್ತೆ ವ್ಯಾಪಕವಾಗಬಹುದೆಂಬ ಭೀತಿ ಮಹಾರಾಷ್ಟ್ರ ಸರ್ಕಾರವನ್ನು ಕಾಡುತ್ತಿದೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲೂ ರೂಪಾಂತರ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮತ್ತೊಮ್ಮೆ ಲಾಕ್ ಡೌನ್ ಹೇರಲಾಗುತ್ತದಾ ಎಂಬ ಆತಂಕ ಎದುರಾಗಿದೆ.

ಕೋವಿಡ್ ಬಗ್ಗೆ ಪ್ರಸ್ತುತ ಇರುವ ಎಲ್ಲಾ ಮಾರ್ಗಸೂಚಿಗಳು ಮುಂದುವರಿಯಲಿವೆ ಎಂದು ಆದೇಶದಲ್ಲಿ ಸರ್ಕಾರ ತಿಳಿಸಿದೆ. ದೇಶದಲ್ಲಿ ಕೊರೊನಾದ ಹೊಸ ರೂಪಾಂತರಿ ತಳಿಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments