ಬೆಂಗಳೂರು : ಕೊವಿಡ್ 19 ಕುರಿತಂತೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು ವರದಿಯಲ್ಲಿ ಇಂದು 2584 ಮಂದಿಗೆ ಕೊರೋನಾ ವೈರಸ್ ತಗುಲಿರುವುದಾಗಿ ಹೇಳಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 8,53,796 ಕ್ಕೇರಿದೆ.
ಇಂದು ರಾಜ್ಯದಲ್ಲಿ 27,908 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 82610 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 1,10,517 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ.ಇದರಲ್ಲಿ ಇಂದು 2,584 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಕಳೆದ 24 ಗಂಟೆಯಲ್ಲಿ 2,881 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8.11 ಲಕ್ಷ ದಾಟಿದೆ. ರಾಜ್ಯದಲ್ಲಿ ಇನ್ನೂ ಕೂಡ 30,743 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 1665 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 353146 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2881 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 811581 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.