ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ , ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಅವರ ಮಗ ಅಮರ್ತ್ಯ ಅವರ ಜೊತೆ ಗುರುವಾರ ನಿಶ್ಚಿತಾರ್ಥ ನಡೆಯಲಿದೆ.
ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ನಡೆಯಲಿದೆ.ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದ್ದು ಕಾರ್ಯಕ್ರಮವನ್ನು ಸರಳವಾಗಿ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಅಮೇರಿಕಾದಲ್ಲಿ ಶಿಕ್ಷಣ ಪಡೆದಿರುವಂತ ಅಮರ್ತ್ಯ, ತಂದೆ ಸಿದ್ಧಾರ್ಥ್ ಸಾವಿನ ಬಳಿಕ ತಾಯಿ ಮಾಳವಿಕಾ ಅವರೊಂದಿಗೆ ಕಾಫಿ ಡೇ ವ್ಯವಹಾರ ನಿರ್ವಹಿಸುತ್ತಿದ್ದಾರೆ.ಇನ್ನು ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಇಂಜಿನಿಯರಿಂಗ್ ಪದವಿ ಮುಗಿಸಿ, ತಂದೆ ಸ್ಥಾಪಿಸಿರುವಂತ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.
ಇವರಿಬ್ಬರ ನಿಶ್ಚಿತಾರ್ಥ ಕಳೆದ ಜೂನ್ 12ರಂದೇ ನಿಗದಿ ಮಾಡಲಾಗಿತ್ತು. ಆದರೆ ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದು,ನಾಳೆ ಇವರಿಬ್ಬರ ನಿಶ್ಚಿತಾರ್ಥ ನಡೆಯಲಿದೆ. ಇನ್ನು ಕಾರ್ಯಕ್ರಮಕ್ಕೆ ಎಸ್ ಎಂ. ಕೃಷ್ಣ ಮತ್ತು ಡಿ.ಕೆ ಶಿವಕುಮಾರ್ ಕುಟುಂಬಸ್ಥರು ಹಾಗೂ ಆತ್ಮೀಯರಿಗಷ್ಟೇ ಆಹ್ವಾನ ನೀಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.