Friday, May 14, 2021
No menu items!
Home Karnataka ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ?: ಡಿ.ಕೆ. ಶಿವಕುಮಾರ್ ಪ್ರಶ್ನೆ

ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ?: ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸದಾಶಿವನಗರದ ತಮ್ಮ ನಿವಾಸದ ಬಳಿ ಅವರು, ಸುಧಾಕರ್ ಆಗಲಿ, ಬೇರೆ ಯಾರೇ ಆಗಲಿ ಯಾರೊಬ್ಬರ ಹೇಳಿಕೆಗೂ ನಾನು ಉತ್ತರ ನೀಡಲ್ಲ. ಕೊರೋನಾ ಸಮಯದಲ್ಲಿ ನಾವು ಸಹಕಾರ ಕೊಟ್ಟಿಲ್ಲ ಅಂತಾ ಮುಖ್ಯಮಂತ್ರಿಗಳು ಹೇಳಲಿ, ನೋಡೋಣ. ಅವರು ಮಾಡುವ ಭ್ರಷ್ಟಾಚಾರಗಳಿಗೆ ನಾವು ಸಹಕಾರ ಕೊಡಬೇಕಾ? ಅದರಲ್ಲಿ ಭಾಗಿಯಾಗಬೇಕಾ? ಇವರು ಪ್ರಚಾರಕ್ಕೋಸ್ಕರ ಏನು ಬೇಕೋ ಅದನ್ನು ಮಾಡುತ್ತಿದ್ದಾರೆ. ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ಇವರಿಗೆ ಹೇಳೋರು, ಕೇಳೋರು ಯಾರೂ ಇಲ್ಲ.’

‘ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸರಕಾರದ ಪ್ರತಿನಿಧಿಗಳು ಜನರನ್ನು ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಹಗಲು ವೇಳೆ ಓಡಾಟ ಮಾಡಬಹುದು, ರಾತ್ರಿ ಹೊತ್ತು ಕರ್ಫ್ಯು ಮಾಡುವುದೇಕೆ? ಇದರಿಂದ ಸೋಂಕು ನಿಯಂತ್ರಣ ಸಾಧ್ಯವಾ? ಈ ಬಗ್ಗೆ ಯಾರ ಬಳಿ ಚರ್ಚೆ ಮಾಡಿದ್ದಾರೆ? ರಾತ್ರಿ ವೇಳೆ ಸೋಂಕು ಹರಡುತ್ತದೆ ಎನ್ನುವುದಕ್ಕೆ ಪುರಾವೆ, ದಾಖಲೆಗಳಿವೆಯೇ? ಹಗಲು ವೇಳೆ ಹರಡುವುದಿಲ್ಲವೇ?’

‘ಹಗಲಲ್ಲಿ ಸಾವಿರಾರು ಜನ ಸೇರುತ್ತಾರೆ, ಆಗ ಕೊರೋನಾ ಸೋಂಕು ತಗುಲುವುದಿಲ್ಲವೇ? ಯಾವುದೋ ಕೆಲವು ವರ್ಗಗಳಿಗೆ ತೊಂದರೆ ಕೊಡಲು ತೀರ್ಮಾನ ಕೈಗೊಳ್ಳಬಾರದು. ಹೊಸ ವರ್ಷ ಆಚರಣೆ ಬೇರೆ ವಿಚಾರ.’

‘ನೀವು ಕೊರೋನಾ ನಿಯಂತ್ರಣ ಎಲ್ಲಿ ಮಾಡಿದ್ದೀರಿ? ಸುಮ್ಮನೆ ವಿರೋಧ ಪಕ್ಷಗಳ ಬಗ್ಗೆ ಮಾತನಾಡುವುದಲ್ಲ. ಅಧಿವೇಶನ ಕರೆಯಿರಿ. ಎಲ್ಲರೂ ಚರ್ಚೆ ಮಾಡೋಣ. ಅವರ ಇಷ್ಟಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಅವರು ಸರ್ಕಾರವನ್ನು ತಮ್ಮ ಖಾಸಗಿ ಆಸ್ತಿ ಎಂದು ಭಾವಿಸಿದ್ದಾರೆ. ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ವಿಚಾರವಾಗಿ ಯಾರನ್ನಾದರೂ ಕರೆದು ಮಾತನಾಡಿದ್ದಾರಾ? ಯಾರದಾದರೂ ಸಲಹೆ ಪಡೆದಿದ್ದಾರಾ?’

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments