ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2020 ಕ್ಕೆ ಇಂದು ಜಯದೇವ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಕೊರೋನಾ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ಮೈಸೂರು ದಸರಾ ಮಹೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದ್ದು, ಇಂದು ಬೆಳಗ್ಗೆ 7.45 ರ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಜಯದೇವ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್ .ಮಂಜುನಾಥ್ ಉದ್ಘಾಟಿಸಿದರು.








