Friday, May 14, 2021
No menu items!
Home Karnataka ಪ್ರಣಾಳಿಕೆಯಿಂದಲೇ ಎದುರಾಳಿಗಳಿಗೆ ನಡುಕ ಹುಟ್ಟಿಸಿದ್ದ ಗಂಗಮ್ಮನಿಗೆ ಸೋಲು..!

ಪ್ರಣಾಳಿಕೆಯಿಂದಲೇ ಎದುರಾಳಿಗಳಿಗೆ ನಡುಕ ಹುಟ್ಟಿಸಿದ್ದ ಗಂಗಮ್ಮನಿಗೆ ಸೋಲು..!

ತುಮಕೂರು: ಇಂದು ಗ್ರಾಮಪಂಚಾಯತಿ ಚುನಾವಣೆಯ ಫಲಿತಾಂಶ ಬಂದಿದೆ. ಚುನಾವಣೆಗೂ ಮುನ್ನ ಜಿಲ್ಲೆಯ ಕಲ್ಕೆರೆ ಗ್ರಾಮ ಪಂಚಾಯಿತಿಯ ಗಂಗಮ್ಮ ಎನ್ನುವವರು, ತನ್ನ ಪ್ರಣಾಳಿಕೆಯಿಂದಲೇ ಎಲ್ಲರ ಗಮನ ಸೆಳೆದಿದ್ದರು. ಎದುರಾಳಿಗಳಿಗೆ ಅವರ ಪ್ರಣಾಳಿಕೆ ನಡುಕ ಹುಟ್ಟಿಸಿತ್ತು. ಅವರ ಪ್ರಣಾಳಿಕೆ ನೋಡಿದವರು ಈಕೆಯೇ ಗೆಲ್ಲುತ್ತಾರೆ ಎಂಬ ಊಹೆಗಳಿದ್ದವು. ಆದ್ರೆ ಆ ಊಹೆಗಳೆಲ್ಲಾ ಉಲ್ಟಾ ಆಗಿ, ಗಂಗಮ್ಮ ಸೋತಿದ್ದಾರೆ.

ತಮಗೆ ಮತ ಹಾಕಿದರೆ ಮಾಡುವ ಕೆಲಸಗಳ ಬಗ್ಗೆ ಹಾಗೂ ಮತ ಹಾಕದಿದ್ದರೆ ಮಾಡುವ ಕೆಲಸಗಳ ಕುರಿತು ಕರಪತ್ರದಲ್ಲಿ ನಮೂದಿಸಿ ವಿಶಿಷ್ಟ ಪ್ರಚಾರ ಮಾಡಿದ್ದರು. ಅದರಲ್ಲೂ ಗೆದ್ದರೆ ಮಾಡುವ ಕೆಲಸಗಳಿಗಿಂತ ಸೋತರೆ ಮಾಡುವ ಕೆಲಸಗಳೇ ಪಟ್ಟಿಯೇ ಎದುರಾಳಿಗಳಿಗೆ ನಡುಕ ಉಂಟು ಮಾಡುವಂತಿತ್ತು.

ಒಂದು ವೇಳೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗಂಗಮ್ಮ ಗೆದ್ದಿದ್ದರೆ, ದೇವಾಲಯ ಮತ್ತು ಅರಳಿ ಕಟ್ಟೆ ಕಟ್ಟಿಸುವುದು. ರಸ್ತೆ ನಿರ್ಮಾಣ, ನೀರು ರಸ್ತೆಗೆ ಹೋಗದಂತೆ ಸಿ.ಸಿ ಚರಂಡಿ ಮಾಡಿಸುವ ಭರವಸೆ ಕೊಡಲಾಗಿತ್ತು. ಚುನಾವಣೆಯಲ್ಲಿ ಸೋತರೆ, ಅನರ್ಹವಾಗಿ ಪಡೆದಿರುವ ರೇಷನ್ ಕಾರ್ಡ್ ರದ್ದು ಮಾಡುವುದು, ಸುಳ್ಳು ಮಾಹಿತಿ ಕೊಟ್ಟು 40 ಕುಟುಂಬಗಳು ಪಡೆಯುತ್ತಿರುವ ವಿವಿಧ ಯೋಜನೆಯ ಹಣ ಕಟ್ ಮಾಡಿಸುವುದು. ಮೂಲ ದಾಖಲಾತಿ ಇಲ್ಲದೆ 11 ಕುಟುಂಬಗಳು ಉತ್ತುವರಿ ಮಾಡಿರುವ ಜಾಗವನ್ನು ತೆರವುಗೊಳಿಸುವುದು ಹಾಗೂ ಹಳೇ ದಾಖಲೆಯಂತೆ ಸ್ಮಶಾನ ಮಾಡಿಸುವುದು ಎಂದು ಕರಪತ್ರದಲ್ಲಿ ತಿಳಿಸಿದ್ದರು.

ಇವರ ಕರಪತ್ರ ಇಡೀ ರಾಜ್ಯದ ತುಂಬೆಲ್ಲಾ ವೈರಲ್ ಆಗಿತ್ತು. ಖುದ್ದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments