Tuesday, August 3, 2021
No menu items!
Home Bharata ದೆಹಲಿಯಲ್ಲಿ ಮತ್ತೆ ದಾಖಲಾಯ್ತು ಕಳಪೆ ವಾಯು ಮಾಲಿನ್ಯ..!

ದೆಹಲಿಯಲ್ಲಿ ಮತ್ತೆ ದಾಖಲಾಯ್ತು ಕಳಪೆ ವಾಯು ಮಾಲಿನ್ಯ..!

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ವಾಯು ಮಾಲಿನ್ಯ ವಿಚಾರಕ್ಕೆ ಯಾವಾಗಲೂ ಸುದ್ದಿಯಲ್ಲಿರುತ್ತದೆ. ಕೊರೊನಾ ಬಂದಾದ ನಂತರದಲ್ಲಿ ಲಾಕ್ ಡೌನ್ ಮಾಡಲಾಗಿತ್ತು. ಆ ಸಮಯದಲ್ಲಿ ಕೊಂಚ ತಗ್ಗಿದ್ದ ವಾಯು ಮಾಲಿನ್ನಯ ಇದೀಗ ಮತ್ತೆ ದಾಖಲಾಗಿದೆ. ದೆಹಲಿಯಲ್ಲಿನ ಗಾಳಿಯ ಗುಣಮಟ್ಟದ ಕುರಿತು ಸರ್ಕಾರ ಇಂದು ಸೂಚ್ಯಾಂಕ ಬಿಡುಗಡೆ ಮಾಡಿದೆ. ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆ ಹಂತಕ್ಕೆ ಕುಸಿದಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ನಗರದ ವಾಯು ಗುಣಮಟ್ಟದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಡಿಪಿಸಿಸಿ ಗುರುವಾರದಿಂದ ರಾಷ್ಟ್ರ ರಾಜಧಾನಿಯಲ್ಲಿ ಡೀಸೆಲ್ ಜನರೇಟರ್ ಬಳಕೆಯನ್ನು ಗ್ರೇಡೆಡ್ ರೆಸ್ಪಾನ್ಸ್ ಕ್ರಿಯಾ ಯೋಜನೆ (ಜಿಆರ್ಪಿ) ಅಡಿಯಲ್ಲಿ ನಿಷೇಧಿಸಿದೆ. ಮುಂಬರುವ ಚಳಿಗಾಲದ ಅವಧಿಯನ್ನು ಪರಿಗಣಿಸಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ದೆಹಲಿ-ಎನ್ಸಿಆರ್ನಲ್ಲಿ 50 ತಂಡಗಳನ್ನು ಪರಿಶೀಲನೆಗೆ ನಿಯೋಜಿಸಿರುವುದಾಗಿ ತಿಳಿಸಿದೆ.

ಕೃಷಿ ಭೂಮಿಯಲ್ಲಿ ಒಣ ಹುಲ್ಲುಗಳನ್ನು ಸುಡುತ್ತಿರುವುದೇ ವಾಯು ಮಾಲಿನ್ಯಕ್ಕೆ ಕಾರಣ. ಹೀಗಾಗಿ ಈ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಭತ್ತದ ಒಣಹುಲ್ಲಿನ ಸಮಸ್ಯೆಯನ್ನು ಎದುರಿಸಲು ರೈತರಲ್ಲಿ ಅರಿವು ಮೂಡಿಸಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ತಿಳಿಸಿದ್ದಾರೆ.

ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (ಡಿಪಿಸಿಸಿ) ಅಂಕಿಅಂಶಗಳ ಪ್ರಕಾರ, ಗುರುವಾರ ಬೆಳಿಗ್ಗೆ ಎಕ್ಯೂಐ ಐಟಿಒನಲ್ಲಿ 366, ಆರ್ಕೆ ಪುರಂನಲ್ಲಿ 309, ಆನಂದ್ ವಿಹಾರದಲ್ಲಿ 313 ಮತ್ತು ವಾಜೀರ್ಪುರದಲ್ಲಿ 339 ಎಂದು ದಾಖಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments