Tuesday, October 26, 2021
No menu items!
Home Bharata ಐಪಿಎಲ್ : ಮೊದಲ ಕ್ವಾಲಿಫೈಯರ್ ನಲ್ಲಿ ಮುಂಬೈ -ಡೆಲ್ಲಿ ಫೈಟ್; ಗೆದ್ದರೆ ಫೈನಲ್, ಸೋತರೆ ಮತ್ತೊಂದು...

ಐಪಿಎಲ್ : ಮೊದಲ ಕ್ವಾಲಿಫೈಯರ್ ನಲ್ಲಿ ಮುಂಬೈ -ಡೆಲ್ಲಿ ಫೈಟ್; ಗೆದ್ದರೆ ಫೈನಲ್, ಸೋತರೆ ಮತ್ತೊಂದು ಅವಕಾಶ

ದುಬೈ : 13 ನೇ ಆವೃತ್ತಿಯ ಇಂಡಿಯನ್ ಕ್ರಿಕೆಟ್ ಪ್ರೀಮಿಯರ್‌ ಲೀಗ್ ನ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು ನಡೆಯಲಿದ್ದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಫೈನಲ್ ಹಂತ ಪ್ರವೇಶಿಸದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ.

ಈ ಬಾರಿಯ ಐಪಿಎಲ್ ಗೆಲ್ಲುವ ನೆಚ್ಚಿನ ತಂಡವೆಂದೇ ಬಿಂಬಿತವಾಗಿರುವ 4 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಟೀಂ , ಭರ್ಜರಿ ಫರ್ಪಾಮೆನ್ಸ್ ನೊಂದಿಗೆ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ವಿರಾಜಮಾನವಾಗಿದೆ. ಲೀಗ್ ಹಂತದಲ್ಲಿ ಆಡಿರುವ 14 ಪಂದ್ಯಗಳಲ್ಲಿ 9ರಲ್ಲಿ ಜಯಗಳಿಸಿ ಪ್ಲೇ ಆಫ್ ಗೆ ಅರ್ಹತೆ ಗಳಿಸಿದೆ. ನಾಲ್ಕು ಪಂದ್ಯಗಳಿಗೆ ಗಾಯದ ಸಮಸ್ಯೆ ಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ ಕೊನೆಯ ಪಂದ್ಯದಿಂದ ತಂಡಕ್ಕೆ ಮರಳಿದ್ದಾರೆ. ಇದು ತಂಡದ ಭರವಸೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇನ್ನು ಮುಂಬೈ ಇಂಡಿಯನ್ಸ್ ಅತ್ಯಮೋಘ ಬ್ಯಾಟಿಂಗ್‌ ಲೈನ್ ಆಫ್ ಹೊಂದಿದೆ ಮತ್ತು ಬೌಲಿಂಗ್‌ ವಿಭಾಗದಲ್ಲೂ ಬಲಿಷ್ಠವಾಗಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಲೀಗ್ ಹಂತದಲ್ಲಿ ಆಡಿರುವ 14 ಪಂದ್ಯಗಳಲ್ಲಿ 8 ರಲ್ಲಿ ಗೆದ್ದು ಐಪಿಎಲ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಿಯಾಗಿ ಪ್ಲೇ ಆಫ್ ಪ್ರವೇಶಿದೆ. ಆದರೆ ಲೀಗ್ ಹಂತದಲ್ಲಿ ಮುಂಬೈ ವಿರುದ್ಧ ಡೆಲ್ಲಿ ಎರಡೂ ಪಂದ್ಯಗಳಲ್ಲಿ ಸೋತಿದೆ. ಆದರೂ ಸತತ ನಾಲ್ಕು ಸೋಲುಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನ ಮಣಿಸಿರುವ ಡೆಲ್ಲಿ ಟೀಂ ಬಲಿಷ್ಠ ಮುಂಬೈ ವಿರುದ್ದವೂ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಫೈನಲ್ ಗೆ ಲಗ್ಗೆಯಿಡಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ.

ಒಂದು ದಿನದ ವಿರಾಮದ ಬಳಿಕ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ.ಸೋತ ತಂಡಕ್ಕೆ ಫೈನಲ್ ಪ್ರವೇಶಿಸಲು ಇನ್ನೊಂದು ಅವಕಾಶ ದೊರೆಯಲಿದೆ.ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ಇಂದಿನ ಪಂದ್ಯ ನಡೆಯಲಿದ್ದು ಉಭಯ ತಂಡಗಳು ಗೆಲುವಿನ ಲೆಕ್ಕಾಚಾರದಲ್ಲಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments