Thursday, September 16, 2021
No menu items!
Home Bharata ಎರಡನೇ ಸ್ಥಾನಕ್ಕಾಗಿ ಪೈಪೋಟಿ; ಆರ್ ಸಿಬಿ -ಡೆಲ್ಲಿ ನಡುವೆ ಹೈವೋಲ್ಟೇಜ್ ಫೈಟ್..

ಎರಡನೇ ಸ್ಥಾನಕ್ಕಾಗಿ ಪೈಪೋಟಿ; ಆರ್ ಸಿಬಿ -ಡೆಲ್ಲಿ ನಡುವೆ ಹೈವೋಲ್ಟೇಜ್ ಫೈಟ್..

ಅಬುಧಾಬಿ: 13 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್ ನಲ್ಲಿ ಇಂದು ಜಿದ್ದಾಜಿದ್ದಿನ ಪಂದ್ಯ ನಡೆಯಲಿದೆ. ಹೈವೋಲ್ಟೇಜ್ ಪಂದ್ಯ ಎಂದೇ ಬಿಂಬಿತವಾಗಿರುವ ಇಂದಿನ ಪಂದ್ಯದಲ್ಲಿ ಬಲಾಢ್ಯ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣೆಸಾಡಲಿವೆ.

ಪ್ರಸ್ತುತ ಐಪಿಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಮಾತ್ರ ತನ್ನ ಪ್ಲೇ ಆಫ್ ಹಂತವನ್ನ ಖಚಿತಪಡಿಸಿಕೊಂಡಿವೆ. ಚೆನ್ನೈ , ರಾಜಸ್ಥಾನ್ ಮತ್ತು ಪಂಜಾಬ್ ತಂಡಗಳು ಅಧಿಕೃತವಾಗಿ ಐಪಿಎಲ್ ನಿಂದ ಹೊರನಡೆದಿವೆ. ಉಳಿದ ತಂಡಗಳು ಮುಂದಿನ ಹಂತ ತಲುಪಬೇಕಾದರೆ ತಮಗಿರುವ ಮುಂದಿನ ಒಂದು ಪಂದ್ಯ ವನ್ನ ಗೆಲ್ಲಲೇ ಬೇಕಾದ ಒತ್ತಡದಲ್ಲಿ ಸಿಲುಕಿವೆ. ಒಂದು ವೇಳೆ ಸೋತರೆ ಇತರ ತಂಡಗಳ ಫಲಿತಾಂಶಕ್ಕಾಗಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ 13 ಪಂದ್ಯಗಳಲ್ಲಿ 7 ರಲ್ಲಿ ಗೆದ್ದು 14 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಸತತ ಮೂರು ಪಂದ್ಯ ಸೋತಿರುವುದು ಕೊಹ್ಲಿ ಬಳಗಕ್ಕೆ ತಲೆನೋವಾಗಿ ಪರಿಣಮಿಸಿದೆ. ಆದುದರಿಂದ ಇಂದಿನ ಪಂದ್ಯ ಗೆಲ್ಲಲೇ ಬೇಕಾದ ಒತ್ತಡದಲ್ಲಿ ಸಿಲುಕಿದೆ.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡಾ ಆಡಿರುವ 13 ಪಂದ್ಯಗಳಲ್ಲಿ 7 ರಲ್ಲಿ ಗೆದ್ದು ಐಪಿಎಲ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ . ಇತ್ತ ಶ್ರೇಯಸ್ ಅಯ್ಯರ್ ನಾಯಕತ್ವದ ಸ್ಥಿತಿ ಕೂಡಾ ಆರ್ ಸಿಬಿ ಯಂತದ್ದೇ ಆಗಿದ್ದು ಕಳೆದ ಮೂರು ಪಂದ್ಯಗಳನ್ನ ಸತತವಾಗಿ ಸೋಲುಂಡಿದೆ. ಡೆಲ್ಲಿ ತಂಡಕ್ಕೂ ಕೂಡಾ ಇಂದಿನ ಪಂದ್ಯ ಮಹತ್ವಪೂರ್ಣವಾಗಿದ್ದು ಗೆದ್ದರೆ ತನ್ನ ಪ್ಲೇ ಆಫ್ ಹಂತ ಖಚಿತಪಡಿಸಿಕೊಳ್ಳಲಿದೆ.

ಎರಡೂ ತಂಡಗಳಿಗೂ ಇಂದಿನ ಪಂದ್ಯ ಅತ್ಯಂತ ಮಹತ್ವಪೂರ್ಣವಾಗಿದ್ದು, ಗೆದ್ದ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಖಚಿತಪಡಿಸೊಕೊಳ್ಳಲಿದೆ. ಜೊತೆಗೆ ಮೊದಲ ಕ್ವಾಲಿಫೈಯರ್ ನಲ್ಲಿ ಆಡುವ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು ಮುಂಬೈ ತಂಡವನ್ನ ಎದುರಿಸಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments