ಚೆನ್ನೈ :ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ವಿಜಯ್ ರೆಡ್ಡಿ ಶುಕ್ರವಾರದಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿಜಯ್ ರೆಡ್ಡಿ ಕನ್ನಡ ಸೇರಿದಂತೆ ತೆಲುಗು, ತಮಿಳು ಮತ್ತು ಹಿಂದಿಯಲ್ಲೂ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದು, ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರವಿದ್ದ ಅವರು ಕುಟುಂಬದವರೊಂದಿಗೆ ಚೆನ್ನೈನಲ್ಲಿ ನೆಲೆಸಿದ್ದರು. ವಿಜಯ್ ರೆಡ್ಡಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ
ಸೂಚಿಸಿದ್ದಾರೆ.
ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶನ ಮಾಡಿದ್ದ ವಿಜಯ್ ಭಕ್ತಿ ಪ್ರದಾನ , ಐತಿಹಾಸಿಕ ಹಾಗೂ ಸಾಮಾಜಿಕ ಚಿತ್ರಗಳನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡವರು.


ಬಹಳ ಸಜ್ಜನಿಕೆ , ಸರಳ , ವ್ಯಕ್ತಿಯಾಗಿದ್ದ ವಿಜಯ್ ರೆಡ್ಡಿ ಹಲವಾರು ಕೊಡುಗೆಯನ್ನು ಚಿತ್ರಂರಗಕ್ಕೆ ನೀಡಿದ್ದು , ಬಹಳಷ್ಟು ನಿರ್ದೇಶಕರು ಇವರ ಗರಡಿಯಲ್ಲಿ ಪಳಗಿದ್ದಾರೆ. ಅದೇ ರೀತಿ ಬಹುತೇಕ ತಾರೆಯರ ಯಶಸ್ಸಿಗೆ ಕಾರಣಕರ್ತರು ಆಗಿದ್ದಾರೆ.

ವಿಜಯ್ ರೆಡ್ಡಿ ನಿರ್ದೇಶನದ ಭಕ್ತ ಪ್ರಹ್ಲಾದ ಸಿನಿಮಾದಲ್ಲಿ ಪುನೀತ್ ರಾಜ್ ನಟಿಸಿದ್ದಾರೆ. ಅವರ ನಿರ್ದೇಶನದ ಸಿನಿಮಾದಲ್ಲಿ ನಟಿಸಿರುವುದೇ ನನ್ನ ಭಾಗ್ಯ ಎಂದು ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.