Saturday, July 24, 2021
No menu items!
Home Karnataka ಯೋಗಿ ಸರ್ಕಾರ ದೇಶಕ್ಕೆ ರೋಗಿ ಆಗಿದೆ : ಡಿಕೆಶಿ ವಾಗ್ದಾಳಿ

ಯೋಗಿ ಸರ್ಕಾರ ದೇಶಕ್ಕೆ ರೋಗಿ ಆಗಿದೆ : ಡಿಕೆಶಿ ವಾಗ್ದಾಳಿ

ಬೆಳಗಾವಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ವಿಚಾರಕ್ಕೆ ಸಂಬಂಧಸಿದಂತೆ ಡಿ ಕೆ ಶಿವಕುಮಾರ್ ಯುಪಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ದಲಿತ ಹೆಣ್ಣುಮಗಳ ತಂದೆ ತಾಯಿಗೆ ಸಾಂತ್ವಾನ ಹೇಳಲು ಹೋದ ನಮ್ಮ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ನಾಯಕರನ್ನೇ ಈ ರೀತಿ ನಡೆಸಿಕೊಳ್ಳುವ ಬಿಜೆಪಿ, ಜನಸಾಮಾನ್ಯರನ್ನು ಹೇಗೆ ನಡೆಸಿಕೊಳ್ಳಲಿದೆ? ಆ ಪಕ್ಷದ ಮನಸ್ಥಿತಿ ಎಂತಹದು ಎಂಬುದು ದೇಶದ ಜನರ ಮುಂದೆ ಇಂದು ಬಯಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನವನ್ನು ಖಂಡಿಸಿದ್ದಾರೆ. ಅಲ್ಲದೆ ಯೋಗಿ ಸರ್ಕಾರ ದೇಶಕ್ಕೆ ರೋಗವನ್ನು ತಂದಿದೆ ಎಂದು ಆರೋಪಿಸಿದರು.

ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಬೇಟಿ ಬಚಾವ್, ಬೇಟಿ ಪಡಾವ್’ ಎಂಬ ಘೋಷಣೆ ಕೊಟ್ಟರು. ಇವತ್ತು ಉತ್ತರ ಪ್ರದೇಶದಲ್ಲಿ ಯೋಗಿ ಅವರ ಸರ್ಕಾರ ರೋಗಿ ಸರ್ಕಾರ ಆಗಿದೆ.

ಈ ಅತ್ಯಾಚಾರ ಕೇವಲ ದೇಶದ ಪ್ರತಿ ಹೆಣ್ಣಿನ ಸ್ವಾಭಿಮಾನ ವಿಚಾರ ಅಲ್ಲ. ಇಡೀ ಮನುಕುಲಕ್ಕೆ ಆಗಿರುವ ಅಪಮಾನ. ಆಕೆಯ ಶವವನ್ನು ಪೋಷಕರಿಗೆ ತೋರಿಸದೆ ಬಿಜೆಪಿ ಸರ್ಕಾರ ಅತ್ಯಂತ ಕ್ರೂರತೆ ಪ್ರದರ್ಶಿಸಿದೆ.

ಇದನ್ನು ಮಾನವೀಯ ದೃಷ್ಟಿಯಿಂದ ನಮ್ಮ ಪಕ್ಷದ ಇಬ್ಬರು ರಾಷ್ಟ್ರ ನಾಯಕರು ಸಂತ್ರಸ್ತೆಯ ತಂದೆ ತಾಯಿಗೆ ಶಕ್ತಿ, ಆತ್ಮಸ್ಥೈರ್ಯ ತುಂಬಲು ಹೋದರೆ ಅವರ ಮೇಲೆ ಪೊಲೀಸರು ಹಲ್ಲೆ ಮಾಡಿ ಬಂಧಿಸಿದ್ದಾರೆ. ನಮ್ಮ ಸಂಸ್ಕೃತಿಯಲ್ಲಿ ಯಾರಾದರೂ ಆಸ್ಪತ್ರೆ ಸೇರಿದರೆ, ಮೃತಪಟ್ಟರೆ, ತೊಂದರೆಗೆ ಒಳಗಾದ ಸಂದರ್ಭದಲ್ಲಿ ಅವರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಸಮಾಧಾನದ ಮಾತುಗಳನ್ನು ಹೇಳುವುದು ಸಾಮಾನ್ಯ. ಅದೇ ದೃಷ್ಟಿಯಿಂದ ನಮ್ಮ ನಾಯಕರು ಅವರಿಗೆ ಸಾಂತ್ವಾನ ಹೇಳಲು ಹೋಗುತ್ತಿದ್ದರೆ ಹೊರತು ಕಾನೂನು ಸುವ್ಯವಸ್ಥೆಗೆ ಭಂಗ ತರಲು ಅಲ್ಲ.

ಆದರೆ ಸರ್ಕಾರ ತನ್ನ ಅಧಿಕಾರ ಹಾಗೂ ಪೊಲೀಸ್ ಪಡೆಯನ್ನು ದುರ್ಬಳಕೆ ಮಾಡಿಕೊಂಡು ನಮ್ಮ ನಾಯಕರನ್ನು ತಡೆದು, ಅವರನ್ನು ನಡೆಸಿಕೊಂಡ ರೀತಿ ಸರಿ ಅಲ್ಲ. ರಾಷ್ಟ್ರ ನಾಯಕರನ್ನೇ ಈ ರೀತಿ ನಡೆಸಿಕೊಂಡರೆ, ಜನರನ್ನು ನೀವು ಯಾವ ರೀತಿ ನೋಡುತ್ತೀರಾ ಎಂಬುದನ್ನು ತೋರುತ್ತದೆ ಎಂದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments