Friday, May 14, 2021
No menu items!
Home Karnataka ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ FIR: ಇಷ್ಟು ನೀಚ ರಾಜಕಾರಣ ನೋಡಿಲ್ಲ ಎಂದ ಡಿಕೆಶಿ..!

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ FIR: ಇಷ್ಟು ನೀಚ ರಾಜಕಾರಣ ನೋಡಿಲ್ಲ ಎಂದ ಡಿಕೆಶಿ..!

ಬೆಂಗಳೂರು : ನವೆಂಬರ್ 3 ರಂದು ಆರ್ ಆರ್ ನಗರ ಮತ್ತು ತುಮಕೂರಿನ ಶಿರಾ ಉಪಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೂಡ ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾರ್ಯಕರ್ತರು ಸಾಥ್ ನೀಡಿದ್ದರು. ಈ ಬೆನ್ನಲ್ಲೇ ಕುಸುಮಾ ಮೇಲೆ FIR ಫೈಲ್ ಆಗಿದೆ.

ಈ ಬಗ್ಗೆ ಡಿ ಕೆ ಶಿವಕುಮಾರ್ ಇಂದು ಪ್ರೆಸ್ ಮೀಟ್ ನಡೆಸಿ, ಗರಂ ಆಗಿದ್ದಾರೆ. ಈಗಾಗಲೇ ನೊಂದು ಬೆಂದಿರುವ ಮಹಿಳೆಯನ್ನು ನಾವೂ ರಾಜರಾಜೇಶ್ವರಿ ನಗರಕ್ಕೆ ಅಭ್ಯರ್ಥಿ ಮಾಡಿದ್ದೇವೆ. ಅಭ್ಯರ್ಥಿ ನಾಮಪತ್ರ ನೀಡುವಾಗ ಸಿದ್ದರಾಮಯ್ಯ ಅವರು ಒಂದು ದಿಕ್ಕಿನಿಂದ ನಾನೊಂದು ದಿಕ್ಕಿನಿಂದ ಬಂದಿದ್ದೇವೆ. ನಿಯಮ ಉಲ್ಲಂಘಟನೆ ಎಂದು ನಮ್ಮ ಅಭ್ಯರ್ಥಿ ಮೇಲೆ ಕೇಸ್ ಹಾಕಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಷ್ಟು ನೀಚ ರಾಜಕಾರಣ ನಾನು ಎಂದೂ ನೋಡಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಇನ್ನು ನಮ್ಮ ಅಭ್ಯರ್ಥಿ ಇನ್ನು ಈಗ ಕಣ್ಣು ಬಿಡುತ್ತಿದ್ದಾರೆ. ಯಾರ್ಯಾರು ಎಲ್ಲೆಲ್ಲಿ ಇದ್ದರು ಎಂಬ ಬಗ್ಗೆ ನಮ್ಮಲ್ಲಿ ಮಾಹಿತಿ ಇದೆ. ಯಾಕಂದ್ರೆ ನಮ್ಮ ಡ್ರೋಣ್ ಕ್ಯಾಮೆರಾದಲ್ಲಿ ಪೂರ್ತಿ ಸೆರೆಯಾಗಿದೆ. ಇಬ್ಬರು ಮಂತ್ರಿ ಗಳು ನೂರು ಮೀಟರ್ ಒಳಗೆ ಇದ್ದರು. ಒಬ್ಬ ಹೆಣ್ಣು ಮಗಳ ಮೇಲೆ ಕೇಸ್ ಹಾಕಿ ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆಲ್ಲಾ ನಾವೂ ಹೆದರುತ್ತೇವೆ ಎಂದುಕೊಂಡಿದ್ದರೆ ಅದು ಭ್ರಮೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments