Thursday, September 16, 2021
No menu items!
Home Karnataka ಮೊದಲ ಚುನಾವಣೆಯಲ್ಲಿ ಸೋತಿದ್ದೇನೆ, ನಾನು ಒಪ್ಪಿಕೊಳ್ಳುತ್ತೇನೆ : ಡಿಕೆ ಶಿವಕುಮಾರ್

ಮೊದಲ ಚುನಾವಣೆಯಲ್ಲಿ ಸೋತಿದ್ದೇನೆ, ನಾನು ಒಪ್ಪಿಕೊಳ್ಳುತ್ತೇನೆ : ಡಿಕೆ ಶಿವಕುಮಾರ್

ಬೆಂಗಳೂರು : ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಶಿರಾದಲ್ಲಿ ಕಾಂಗ್ರೆಸ್ ಗೆಲ್ಲುತ್ತೆ ಎಂಬ ಊಹೆ ತಲೆಕೆಳಗಾಗಿದ್ದು, ಮೊದಲ ಬಾರಿಗೆ ಕಮಪ ಅರಳಿದೆ. ಸೋಲಿನ ಬಗ್ಗೆ ಡಿ ಕೆ ಶಿವಕುಮಾರ್ ಮಾತನಾಡಿದ್ದು, ನಮ್ಮ ಕಾರ್ಯಕರ್ತರು ಶಕ್ತಿ ಮೀರಿ ಪಕ್ಷವನ್ನು ಬಲಪಡಿಸಿಲು ಹೋರಾಟ ನಡೆಸಿದ್ದಾರೆ. ನಮ್ಮ ಅಭ್ಯರ್ಥಿ ಉತ್ತಮ ಹೋರಾಟ ಮಾಡಿದ್ದಾರೆ. ಎಲ್ಲರು ನಮಗೆ ಬೆಂಬಲ ನೀಡಿದ್ದಾರೆ. ಇದು ಮೊದಲ ಚುನಾವಣೆ ಅಂತೆಲ್ಲಾ ಹೇಳುತ್ತಿದ್ದರು. ಮೊದಲ ಚುನಾವಣೆಯನ್ನ ನಾನು ಸೋತಿದ್ದೇನೆ ಆದರೆ ನಂತರ ಗೆಲ್ಲುವ ಭರವಸೆ ಇದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಆರ್ ಆರ್ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಸೋಲಾಗಿದೆ. ಮತದಾರರ ತೀರ್ಪನ್ನು ಗೌರವಾನ್ವಿತವಾಗಿ ಒಪ್ಪಿಕೊಳ್ಳುತ್ತೇನೆ. ಏನಾಯ್ತು ಹೇಗಾಯ್ತು ಅನ್ನೋದನ್ನ ಚರ್ಚೆ ಮಾಡಿ ಸರಿಮಾಡಿಕೊಳ್ಳುತ್ತೇವೆ ಎಂದಿದ್ದಾರೆ.

ಇನ್ನು ಶಿರಾ ಚುನಾವಣೆ ಬಗ್ಗೆ ಮಾತನಾಡಿರುವ ಅವರು, ಶಿರಾದಲ್ಲಿ ನಮ್ಮ ನಿರೀಕ್ಷೆ ಹೆಚ್ಚು ಕಡಿಮೆಯಾಗಿದೆ. ನಮಗೆಲ್ಲಾ ಅಲ್ಲಿ ಗೆಲ್ಲುತ್ತೇವೆ ಎಂಬ ನಂಬಿಕೆ ಇತ್ತು. ಆದ್ರೆ ಎಲ್ಲಾ ವೋಟುಗಳು ಬಿಜೆಪಿಗೆ ಹೋಗಿರುವುದು ಅಚ್ಚರಿ ತಂದಿದೆ ಎಂದು ಬಿಜೆಪಿ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಇಂದು ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಿಜೆಪಿಯ ಅಭ್ಯರ್ಥಿ ಮುನಿರತ್ನ 125734 ಮತ ಪಡೆದು ಗೆಲುವು ಸಾಧಿಸಿದ್ದಾರೆ. 67798 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸೋಲನ್ನು ಅನುಭವಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments