Thursday, September 16, 2021
No menu items!
Home Bharata ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಪುತ್ರ ಉದಯಾನಿಧಿ ಸ್ಟಾಲಿನ್ ಅರೆಸ್ಟ್...!

ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಪುತ್ರ ಉದಯಾನಿಧಿ ಸ್ಟಾಲಿನ್ ಅರೆಸ್ಟ್…!

ತಮಿಳುನಾಡು: ತಮಿಳುನಾಡಿನ ಡಿಎಂಕೆ ಪಕ್ಷದ ವರಿಷ್ಠ ಸ್ಟಾಲಿನ್ ಅವರ ಪುತ್ರ ಯುವ ನಾಯಕ, ನಟ ಉದಯಾನಿಧಿ ಸ್ಟಾಲಿನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

ಡಿಎಂಕೆ ಪಕ್ಷದ ಯುವ ನಾಯಕ ಉದಯಾನಿಧಿ ಸ್ಟಾಲಿನ್ ಅವರನ್ನು ತಮಿಳುನಾಡಿನ ತಿರುಕ್ಕುವಳೈನಲ್ಲಿ ತಮ್ಮ ಪಕ್ಷದ ನೂತನ ಚುನಾವಣಾ ಪ್ರಚಾರವನ್ನು ಉದ್ಘಾಟಿಸುವ ವೇಳೆ ಪೊಲೀಸರು ಬಂಧಿಸಿದ್ದಾರೆ. ಕಾರ್ಯಕ್ರಮ ನಡೆಸಲು ಪೊಲೀಸರಿಂದ ಯಾವುದೇ ಅನುಮತಿ ಪಡೆಯದ ಹಿನ್ನೆಲೆ ಉದಯಾನಿಧಿ ಸ್ಟಾಲಿನ್ ರನ್ನು ಇಂದು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆ ತಮಿಳುನಾಡು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಯಾಕೆಂದರೆ ಬಹುನಿರೀಕ್ಷಿತ ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮುಂದಿನ ವರ್ಷ ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ. ಆಡಳಿತರೂಢ ಎಡಿಎಂಕೆ (ಅನ್ನಾ ದ್ರಾವಿಡ ಮುನ್ನೇಟ್ರ ಕಳಗಂ) ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಸಾಧಿಸಿದ್ದು ಜೊತೆಯಾಗಿ ಸರ್ಕಾರ ಮುನ್ನಡೆಸುವ ಇರಾದೆಯಲ್ಲಿದೆ. ಈ ಪಕ್ಷಗಳಿಗೆ ಸೆಡ್ಡು ಹೊಡೆಯಲು ಪ್ರಬಲ ವಿರೋಧ ಪಕ್ಷವಾದ ಡಿಎಂಕೆ (ದ್ರಾವಿಡ ಮುನ್ನೇಟ್ರ ಕಳಗಂ) ಸಹ ಚುನಾವಣಾ ಅಖಾಡಕ್ಕೆ ಸಿದ್ದವಾಗಿದ್ದು ಈಗಾಗಲೇ ಚುನಾವಣಾ ಅಭಿಯಾನವನ್ನು ಆರಂಭಿಸಿದೆ.

ಈ ಹಿನ್ನೆಲೆಯಲ್ಲಿ ಡಿಎಂಕೆ ಯುವ ವಿಭಾಗದ ನಾಯಕ ಉದಯನಿಧಿ ಸ್ಟಾಲಿನ್, ಪಕ್ಷದ ಹಿರಿಯ ನಾಯಕರೊಂದಿಗೆ 75 ದಿನಗಳ ಪ್ರಚಾರ ಅಭಿಯಾನವನ್ನು ಇಂದು ಪ್ರಾರಂಭಿಸಿದರು. ಆದರೆ, ಇಂದು ಅವರ ಮೊದಲ ಸಭೆಗೆ ದಿಢೀರ್​ ದಾಳಿ ನಡೆಸಿರುವ ಪೊಲೀಸ್​ ಅಧಿಕಾರಿಗಳು ಸಭೆ ನಡೆಸಲು ಅನುಮತಿ ಇಲ್ಲದ ಕಾರಣ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ ತಂದನಂತರ ಬಿಡುಗಡೆ ಮಾಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments